Breaking News

ರೈತರಿಗೆ ಸಿಹಿಸುದ್ದಿ: ಕೃಷಿ ಪಂಪ್‌ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡಲು ಸಚಿವರ ಭರವಸೆ

ಚಾಮರಾಜನಗರ: ಹಲವು ಬಾರಿ ವಿದ್ಯುತ್ ಸಮಸ್ಯೆಯಿಂದ ರೈತರು ಬೆಳೆಗಳಿಗೆ ನೀರುಣಿಸುವಾಗ ಸಾಕಷ್ಟು ನಷ್ಟ ಅನುಭವಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿರುವಾಗಲೇ ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ಅನ್ನದಾತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಹೌದು ಚಾಮರಾಜನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿರುವ ವರೆಗೂ, ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರ ಖಾಸಗೀಕರಣ ಆಗಲ್ಲ. ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ ಎಂದು ತಿಳಿಸಿದರು.
ಬೇರೆ ಕಡೆ ವಿದ್ಯುತ್ ಖರೀದಿಸಿ ರೈತರಿಗೆ ಉಚಿತ ವಿದ್ಯುತ್ ನೀಡ್ತಿದ್ದೇವೆ. ವಿದ್ಯುತ್ ಕಳ್ಳತನ ತಪ್ಪಿಸಲು ಕೃಷಿ ಪಂಪ್ ಸೆಟ್‌ಗಳಿಗೆ ಆಧಾರ್ ಲಿಂಕ್ ಕಡ್ಡಾಯ ಮಾಡಲಾಗಿದೆ. ಇದರಿಂದ ರೈತರಿಗೆ ಅನುಕೂಲ ಯಾರೋ ವಿದ್ಯುತ್ ಕಳ್ಳತನ ಮಾಡಿ ರೈತರ ಮೇಲೆ ಹಾಕುತ್ತಿದ್ದರು. ಆಧಾರ್ ಲಿಂಕ್‌ನಿಂದ ಅದೆಲ್ಲಾ ತಪ್ಪಲಿದೆ ನಮ್ಮ ಇಲಾಖೆಗೂ ಲೆಕ್ಕ ಸಿಗಲಿದೆ ಎಂದು ಸ್ಪಷ್ಟಪಡಿಸಿದರು.
ಕೃಷಿ ಪಂಪ್‌ಸೆಟ್ ಅಕ್ರಮ ಸಕ್ರಮದ ಅಡಿ 4 ಲಕ್ಷ ಅರ್ಜಿ ಬಾಕಿ ಇದ್ದವು. ಈಗ ಅದೆಲ್ಲಾ ಕಡಿಮೆಯಾಗಿದೆ. ವಿದ್ಯುತ್ ಲೈನ್‌ನಿಂದ 500 ಮೀಟರ್ ಒಳಗೆ ಇರುವ ಕೃಷಿ ಪಂಪ್‌ಸೆಟ್‌ಗಳ ಸಕ್ರಮಕ್ಕೆ ಕ್ರಮ ವಹಿಸಲಾಗುವುದು. 500 ಮೀಟರ್ ಆಚೆ ಇರುವ ಕೃಷಿ ಪಂಪ್‌ಸೆಟ್‌ಗಳಿಗೆ ಕುಸುಮ್ ಬಿ ಸೋಲಾರ್ ಯೋಜನೆ ಜಾರಿ ಮಾಡಲಾಗುವುದು ಎಂದರು.

Share News

About BigTv News

Check Also

ಬೆಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣ: ಜಲಾಲ್ ನ ಬಂಧನ !

ಬೆಂಗಳೂರು: ಪುಲಿಕೇಶಿನಗರದ ಜರ್ಮಿಯಾ ರಸ್ತೆಯ ಕಟ್ಟಡವೊಂದರಲ್ಲಿ ಅ.20ರಂದು ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಜಲಾಲ್ (25) ಎಂಬ ಯುವಕನನ್ನು …

Leave a Reply

Your email address will not be published. Required fields are marked *