Breaking News

2028ಕ್ಕೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಕೊಡ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯವರು ದೇಶಭಕ್ತಿಯ ಬಗ್ಗೆ ಮಾತನಾಡುತ್ತಾರೆ ಬಿಜೆಪಿಯ ಯಾವುದಾದರೂ ಒಬ್ಬ ನಾಯಕರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿಲ್ಲ ಮೋದಿಯವರು ಮಹಿಳೆಯರಿಗೆ ಮೀಸಲಾತಿ ಕೊಡುವುದಿಲ್ಲ. 2028ಕ್ಕೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಶೇ.50 ಮೀಸಲಾತಿಯನ್ನು ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕೇಂದ್ರ ಕಚೇರಿಯಲ್ಲಿ ನಡೆದ ಇಂದಿರಾಗಾಂಧಿ ಜಯಂತಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಜನತೆಗೆ ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನ ಬಿಜೆಪಿಯವರು 5 ಕೆಜಿಗೆ ಇಳಿಸಿದರು. ಬಡವರ ಪರವಾಗಿ ಇರೋದು ನಾವು, ಗ್ಯಾರಂಟಿ ಯೋಜನೆ ಮಾಡಿದ್ದು ನಾವು ಇಂದಿರಾ ಕ್ಯಾಂಟೀನ್ ಮಾಡಿದ್ದು ನಾವು ಬಿಜೆಪಿ ಅಧಿಕಾರ ಇರೋ ರಾಜ್ಯಗಳಲ್ಲಿ ಇದ್ಯಾ? ಎಸ್‌ಸಿಎಸ್‌ಪಿ ಟಿಎಸ್‌ಪಿ ಹಣ ಇಟ್ಟಿದ್ದೇವೆ. ರಾಜ್ಯದ 1.22 ಕೋಟಿ ಕುಟುಂಬಗಳ ಮನೆ ಯಜಮಾನಿಯರಿಗೆ ತಲಾ 2000 ರೂ. ಹಣ ಕೊಡ್ತಾ ಇದ್ದೀವಿ. ಗೃಹ ಲಕ್ಷ್ಮಿ ಯೋಜನೆಗೆ 32 ಸಾವಿರ ಕೋಟಿ ಖರ್ಚು ಮಾಡ್ತಾ ಇದ್ದೀವಿ. ಒಟ್ಟಾರೆ ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 56 ಸಾವಿರ ಕೋಟಿ ರೂ. ಖರ್ಚು ಮಾಡ್ತಾ ಇದ್ದೀವಿ ಎಂದು ಹೇಳಿದರು.
ನಮ್ಮ ಭಾರತ ದೇಶಕ್ಕೆ ಬಿಜೆಪಿಯವರು ಯಾರಾದರೂ ಪ್ರಾಣ ಕೊಟ್ಟಿದ್ದಾರಾ? ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ನಾವು ಇಂದಿರಾ ಗಾಂಧಿಯನ್ನ ನೆನೆಯಬೇಕು. ಮೋದಿಯವರು ಮಹಿಳೆಯರಿಗೆ ಸ್ಥಾನ ಕೊಡಬೇಕು ಅಂದ್ರೆ 2028ಕ್ಕೆ ಗೊತ್ತಾಗುತ್ತದೆ. ರಾಜಕೀಯ ಇಚ್ಚಾ ಶಕ್ತಿ ಇರಬೇಕು ಮುಖ್ಯವಾಗಿ 2028ಕ್ಕೆ ಇವರೇನು ಇರಲ್ಲ ಅಂತ ಅಂದುಕೊಂಡಿದ್ದೇವೆ. ನಾವೇ ಅಧಿಕಾರಿಕಾರಕ್ಕೆ ಬಂದು ಮಹಿಳೆಯರಿಗೆ ಕೇಂದ್ರದಲ್ಲಿ ಮೀಸಲಾತಿ ಮಾಡಬೇಕು. ದೇಶದಲ್ಲಿ ಮೀಸಲಾತಿ 50 ಪರ್ಸೆಂಟ್ ಮಾಡಲು ವಿರೋಧ ಇಲ್ಲ. ನಾವು ಎಂಪಿ ಚುನಾವಣೆಯಲ್ಲಿ 5 ಮಹಿಳೆಯರಿಗೆ ಟಿಕೆಟ್ ಕೊಟ್ಟಿದ್ದೇವೆ. ಬಿಜೆಪಿ ಅವರು ಎಷ್ಟು ಜನರಿಗೆ ಕೊಟ್ಟರು. ಮಹಿಳೆಯರಿಗೆ ಶೇ.50 ಮೀಸಲಾತಿ ಬಂದರೆ ಸ್ಥಳೀಯ ಚುನಾವಣೆಗಳಲ್ಲಿ ಕೊಡಲ್ಲ ಅನ್ನೋಕೆ ಆಗುತ್ತಾ? ನನ್ನದೇನು ತಕರಾರು ಇಲ್ಲ ಎಂದು ತಿಳಿಸಿದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *