Breaking News

ರಾಜ್ಯದಲ್ಲಿ 17.61 ಲಕ್ಷ ರೈತರಿಗೆ 2021.17 ಕೋಟಿ ರೂ. ಬೆಳೆ ವಿಮೆ ಪರಿಹಾರ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ 17.61 ಲಕ್ಷ ರೈತ ಫಲಾನುಭವಿಗಳಿಗೆ 2021.17 ಕೋಟಿ ರೂ. ಬೆಳೆ ವಿಮೆ ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಬಳಿಕ ಸುದ್ದಿಗೋಷ್ಠ್ಠಿಯಲ್ಲಿ ಈ ಮಾಹಿತಿ ನೀಡಿದರು.
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 22.97 ಲಕ್ಷ ರೈತ ಪ್ರಸ್ತಾವನೆಗಳು 17.60 ಲಕ್ಷ ಹೇಕ್ಟೆರ್ ಪ್ರದೇಶಕ್ಕೆ ನೋಂದಣಿಯಾಗಿದೆ. 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಈವರೆಗೆ 25148 ರೈತ ಪ್ರಸ್ತಾವನೆಗಳು 31690.28 ಹೆಕ್ಟೇರ್ ಪ್ರದೇಶಕ್ಕೆ ನೋಂದಣಿಯಾಗಿದ್ದು, ನೋಂದಣಿ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.
ಸಭೆಯಲ್ಲಿ ಕೃಷಿ ಇಲಾಖೆ ಆಯುಕ್ತರು ವೈ.ಎಸ್.ಪಾಟೀಲ, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತರು ಮಹೇಶ್ ಶಿರೂರು, ನಿರ್ದೇಶಕ ಬಂತನಾಳ, ಕರ್ನಾಟಕ ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕರು ದೇವರಾಜು ಸೇರಿದಂತೆ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *