Breaking News

ಸಿಎಂ ಸಂಧಾನ ಯಶಸ್ವಿ ಹಿನ್ನೆಲೆ ನಾಳೆ ಕರೆ ನೀಡಿದ್ದ ಮದ್ಯ ಮಾರಾಟ ಬಂದ್ ವಾಪಸ್

ಬೆಂಗಳೂರು : ಭ್ರಷ್ಟಾಚಾರಕ್ಕೆ ಕಡಿವಾಣ, ಮದ್ಯ ಮಾರಾಟಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ(ನ.20) ಫೆಡರೇಷನ್ ಆಫ್ ವೈನ್ಸ್ ಮರ್ಚಂಟ್ಸ್ ಅಸೋಸಿಯೇಷನ್ ಕರೆ ನೀಡಿದ್ದ ಮದ್ಯ ಮಾರಾಟ ಬಂದ್ ಅನ್ನು ಸಿಎಂ ಸಂಧಾನದ ಹಿನ್ನೆಲೆಯಲ್ಲಿ ಹಿಂಪಡೆದಿದೆ.
ಇಂದು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಅಸೋಸಿಯೇಷನ್ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮದ್ಯ ಮಾರಾಟಗಾರರ ಎಲ್ಲ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು. ಮದ್ಯ ಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರಕಾರಕ್ಕೆ ಆದಾಯ ತರುವಂತೆ ಕ್ರಮ ವಹಿಸಲಾಗುವುದು. ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಅಭಯ ನೀಡಿದರು.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಯಾವುದೇ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲಿಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಸ್ಪಷ್ಟಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಮಾರಾಟಗಾರರಿಗೆ ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *