ಚಾಮರಾಜನಗರ: ರಾಜ್ಯದಲ್ಲಿ 2,500 ಲೈನ್‌ಮನ್‌ಗಳನ್ನು ನೇಮಕ ಮಾಡಿಕೊಳ್ಳುವ ಸಂದರ್ಶನ ಒಂದೇ ದಿನದಲ್ಲಿ ಮಾಡಲಾಗುತ್ತದೆ. ಈ ಹಿಂದೆ ಬೇರೆ ಬೇರೆ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿತ್ತು. ಹುದ್ದೆಗಳು ಖಾಲಿ ಉಳಿಯದಂತೆ ಏಕಕಾಲದಲ್ಲಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಮಹತ್ವದ ತೀರ್ಮಾನ ಮಾಡಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕುಸುಮ್- ಬಿ ಯೋಜನೆಯಡಿ ಸೋಲಾರ್ ಪಂಪ್‌ಸೆಟ್‌ಗಳಿಗೆ ಶೇ. 80ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 400 ಕೆ.ವಿ. ವಿದ್ಯುತ್ ಉಪಕೇಂದ್ರ ಸೇರಿದಂತೆ ಒಟ್ಟು ಆರು ಹೊಸ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

