Breaking News

ಬೆಂಗಳೂರು, ಮೈಸೂರು ಹಾಗೂ ಬೆಳಗಾವಿಯಲ್ಲಿ ಜಾಗತಿಕ ನಾವಿನ್ಯತಾ ಜಿಲ್ಲೆಗಳನ್ನು ಸ್ಥಾಪಿಸಲು ನಿರ್ಧಾರ: ಸಿಎಂ ಘೋಷಣೆ

ಬೆಂಗಳೂರು : ಭಾರತದ ಮೊದಲ ಗ್ಲೋಬಲ್ ಕೆಪೆಬಿಲಿಟಿ ಸೆಂಟರ್ ನೀತಿಯನ್ನು ಕರ್ನಾಟಕ ಜಾರಿಗೆ ತಂದಿದ್ದು, ನಮ್ಮ ಸರ್ಕಾರವು ಈ ಕೇಂದ್ರಗಳನ್ನು ಸಶಕ್ತಗೊಳಿಸಲು ಹಾಗೂ ಬೆಂಬಲಿಸಲು ಉದ್ದೇಶಿಸಿದೆ. ಇದರ ಮುಂದುವರೆದ ಭಾಗವಾಗಿ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿಯಲ್ಲಿ ಮೂರು ಜಾಗತಿಕ ನಾವೀನ್ಯತಾ ಜಿಲ್ಲೆಗಳನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರು ಅರಮನೆಯಲ್ಲಿ ಏರ್ಪಡಿಸಲಾಗಿರುವ ಮೂರು ದಿನಗಳ 27 ನೇ ಆವೃತ್ತಿಯ ಬೆಂಗಳೂರು ತಂತ್ರಜ್ಞಾನ ಶೃಂಗ-2024ವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂಡಿಯನ್ ವೆಂಚರ್ ಮತ್ತು ಆಲ್ಟರ್ನೇಟ್ ಕ್ಯಾಪಿಟಲ್ ಅಸೋಸಿಯೇಷನ್ ಜೊತೆಗಿನ ನಮ್ಮ ಸಹಯೋಗದ ಮೂಲಕ 200ಕ್ಕೂ ಹೆಚ್ಚು ನವೋದ್ಯಮಗಳಿಗೆ 100 ಧನಸಹಾಯ ಸಂಸ್ಥೆಗಳಿಂದ ಬಂಡವಾಳ ಹೂಡಿಕೆ, ಮಾರ್ಗದರ್ಶನ ಕೊಡಿಸಲಾಗಿದ್ದು ಬೆಳವಣಿಗೆಯ ಅವಕಾಶಗಳನ್ನು ಒದಗಿಸಲಾಗಿದೆ ಎಂದರು.
ಕೋಚನಹಳ್ಳಿಯಲ್ಲಿ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ ನ್ನು ಸ್ಥಾಪಿಸಲಾಗುವುದು. ಇದು ಜಾಗತಿಕ ಸೆಮಿಕಂಡಕ್ಟರ್ ಉದ್ಯಮದಲ್ಲಿ ಕರ್ನಾಟಕದ ಪಾತ್ರವನ್ನು ಮತ್ತಷ್ಟು ಹೆಚ್ಚಿಸುತ್ತದೆಯಲ್ಲದೆ ಉದ್ಯೋಗಗಳನ್ನು ಸೃಷ್ಟಿಸಿ, ನಗರ ಮತ್ತು ಗ್ರಾಮೀಣ ಪ್ರದೇಶಗಳ ಆರ್ಥಿಕ ಬೆಳವಣಿಗೆಗೆ ವೇಗ ನೀಡಲಿದೆ ಎಂದು ನಂಬಿದ್ದೇವೆ ಎಂದು ತಿಳಿಸಿದ್ದಾರೆ.
2022ರಿಂದ 2023 ರವರೆಗೆ 18.2% ಏರಿಕೆಯನ್ನು ಕಂಡಿರುವ ಕರ್ನಾಟಕದ ಸ್ಟಾರ್ಟ್‌ಅಪ್ ಪರಿಸರ ಗಮನಾರ್ಹ ಸಾಧನೆ ಮಾಡಿದೆ. ರಾಜ್ಯದಲ್ಲಿ ಒಟ್ಟು 3,036 ಸ್ಟಾರ್ಟ್‌ಅಪ್‌ಗಳಿವೆ. ಭಾರತದ ಒಟ್ಟು ಸ್ಟಾರ್ಟ್‌ಅಪ್‌ಗಳಲ್ಲಿ 8.7% ಸ್ಟಾರ್ಟ್ ಅಪ್ ಗಳನ್ನು ಹೊಂದುವ ಮೂಲಕ ರಾಜ್ಯವು ಅಗ್ರಸ್ಥಾನದಲ್ಲಿದೆ. ಈ ಯಶಸ್ಸು ರಾಜ್ಯದಲ್ಲಿನ ಉದ್ಯಮಿಗಳಿಗೆ ಸರ್ಕಾರ ನೀಡುತ್ತಿರುವ ಬೆಂಬಲ ಮತ್ತು ಪ್ರೋತ್ಸಾಹದಾಯಕವಾದ ಅವಕಾಶಗಳನ್ನು ತೋರುತ್ತದೆ ಎಂದು ಹೇಳಿದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *