Breaking News

ವಕ್ಫ್ ವಿವಾದಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಹೊಣೆ: ಸಚಿವ ಈಶ್ವರ್ ಖಂಡ್ರೆ ಕಿಡಿ

ಬೀದರ್‌ : ವಕ್ಫ್‌ ವಿವಾದವನ್ನು ಪ್ರಾರಂಭ ಮಾಡಿದ್ದೆ ಬಿಜೆಪಿಯವರು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ. ಬೀದರ್ ನಲ್ಲಿ ಮಾತನಾಡಿದ ಅವರು, ನಾವು ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ನೋಟಿಸ್ ನೀಡಿಲ್ಲ. ನಿಮ್ಮಲ್ಲಿ ದಾಖಲೆ ಇವೆಯಾ..?
ನಾನು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ, ನಾವು ಯಾವ ರೈತರಿಗೂ ನೋಟಿಸ್ ನೀಡಿಲ್ಲ, ಒಂದು ಪಹಣಿಯನ್ನು ತಿದ್ದುಪಡಿ ಮಾಡಿಲ್ಲ. ವಕ್ಫ್ ವಿವಾದಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಹೊಣೆ ಎಂದು ಕಿಡಿಕಾರಿದರು. ಮುಖ್ಯಮಂತ್ರಿಗಳು ಹೇಳಿದ್ದಾರೆ ಯಾವ ರೈತರಿಗೂ ಅನ್ಯಾಯವಾಗಲು ಬಿಡುವುದಿಲ್ಲ, ಯಾವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ. ಒಂದುವೇಳೆ ಬಿಜೆಪಿ ಅವಧಿಯಲ್ಲಿ ರೈತರ ಪಹಣಿಯಲ್ಲಿ ವಕ್ಫ್ ಹೆಸರು ಬಂದಿದ್ದರೆ ಸೂಕ್ತ ತನಿಖೆಯೊಂದಿಗೆ ರೈತರಿಗೆ ಹಿಂತಿರುಗಿಸುತ್ತೇವೆ ಎಂದರು.
ಇದೇ ವೇಳೆ ಸಂಪುಟ ವಿಸ್ತರಣೆಯ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಹಾಗೂ ವರಿಷ್ಠರು ಸಂಪುಟ ವಿಸ್ತರಣೆಯ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡ್ತಾರೆ. ಸರ್ಕಾರ ಸುಭದ್ರವಾಗಿದೆ, ಉತ್ತಮ ಆಡಳಿತ ಕೊಡತಿದ್ದೇವೆ. ಬಿಜೆಪಿ ಯವರು ಹೊಟ್ಟೆ ಕಿಚ್ಚಿನಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *