Breaking News

2024-25 ಸಾಲಿನ ಸಾಂಸ್ಕೃತಿಕ ಚಟುವಟಿಕೆ

ನವಲಗುಂದ : ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಸಹಪಠ್ಯ ಚಟುವಟಿಕೆಗಳು ಉತ್ತಮ ಮನರಂಜನೆ ಜೊತೆಗೆ ಕಲಿಕೆಗೆ ಪೂರಕ ಉತ್ತೇಜನ ನೀಡುತ್ತವೆ ಎಂದು ಶಂಕರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಜಯರಾಮ ಲಮಾಣಿ ಹೇಳಿದರು.

ಅವರು ಪಟ್ಟಣದ ಶ್ರೀ ಶಂಕರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಪದವಿಪೂರ್ವ ಪ್ರಥಮ ಹಾಗೂ ದ್ವಿತೀಯ ವರ್ಗದ ವಿದ್ಯಾರ್ಥಿಗಳಿಗೆ 2024-25 ಸಾಲಿನ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆಯನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಪ್ರಾಸಾವಿಕವಾಗಿ ಮಾತಾಡಿದ ಭೀಮರಾಶಿ ಹೂಗಾರ, ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆಯು ತಾಲೂಕು, ಜಿಲ್ಲೆ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಿ ಮಕ್ಕಳ ಪ್ರತಿಭಗೆ ಸೂಕ್ತ ಅವಕಾಶ ಕಲ್ಪಿಸಿದೆ ವಿದ್ಯಾರ್ಥಿಗಳು ಅದರ ಪ್ರಯೋಜನ ಪಡೆಯಬೇಕೆಂದು ತಿಳಿಸಿದರು.

ನಂತರ ವಿದ್ಯಾರ್ಥಿಗಳು ರಸಪ್ರಶ್ನೆ, ಚರ್ಚೆ, ಪ್ರಬಂಧ, ಜನಪದ ಗೀತೆ, ಭಾವಗೀತೆ, ಭಕ್ತಿಗೀತೆ, ಏಕಪಾತ್ರಾಭಿನಯ, ಆಶುಭಾಷಣ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *