Breaking News

ಎಪಿಎಲ್ ಬಿಪಿಎಲ್ ಕಾರ್ಡ್ ಇದ್ದವರಿಗೆ ಗೃಹಲಕ್ಷ್ಮಿ ಹಣ ಬರುತ್ತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಳಗಾವಿ : 80 ಸಾವಿರ ಬಿಪಿಎಲ್ ಕಾರ್ಡ್ ಗಳನ್ನ ರದ್ದತಿ ಮಾಡುವ ಬದಲಿಗೆ ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿರುವುದರಿಂದ ಯಾವುದೇ ಗೊಂದಲ ಇಲ್ಲ, ಎಪಿಎಲ್, ಬಿಪಿಎಲ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಈ ಮೂಲಕ ಗೃಹ ಲಕ್ಷ್ಮಿ ಹಣ ಸ್ಥಗಿತದ ಆತಂಕದಲ್ಲಿ ಇದ್ದವರಿಗೆ ನೆಮ್ಮದಿಯ ನಿಟ್ಟುಸಿರುವು ಬಿಡುವಂತೆ ಮಾಡಿದ್ದಾರೆ.
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಗೃಹಲಕ್ಷ್ಮೀ ಯೋಜನೆ ವಿಚಾರವಾಗಿ ನಾನು ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಿದ್ದೇನೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿದವರಿಗೆ, ಯಾರು ತೆರಿಗೆ ಕಟ್ಟುವುದಿಲ್ಲ ಅಂತಹವರಿಗೆ ಗೃಹಲಕ್ಷ್ಮೀ ಹಣ ಸಂದಾಯ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *