ಹುಬ್ಬಳ್ಳಿ: 270ನೇ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ, ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಎಸ್‌ಡಿಪಿಐ ಸಂಘಟನೆಯ ಕಾರ್ಯಕರ್ತರು ಆಚರಣೆ ಮಾಡಿದರು. ಆದ್ರೆ ಮೆರವಣಿಗೆ ಮಾಡುವ ವೇಳೆ 31 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ, SDPI ಕಾರ್ಯಕರ್ತರು ಟಿಪ್ಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ವಂದನೆ ಸಲ್ಲಿಸಿದರು. ಬಳಿಕ ಟಿಪ್ಪು ಮೆರವಣಿಗೆಗೆ ಕಾರ್ಯಕರ್ತರು ಮುಂದಾದರು. ಈ ವೇಳೆ ಮೆರವಣಿಗೆಗೆ ಅನುಮತಿಯಿಲ್ಲದ ಕಾರಣ 31 ಜನ ಎಸ್‌ಡಿಪಿಐ ಕಾರ್ಯಕರ್ತರನ್ನು ಕಸಬಾಪೇಟೆ ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ವೇಳೆ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news





