Breaking News

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ಶೀಘ್ರವೇ 15 ಸಾವಿರ ಹುದ್ದೆಗಳ ನೇಮಕಾತಿ

ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಶೀಘ್ರವೇ 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಮೂಲಕ ಮಾಹಿತಿ ನೀಡಿರುವ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯದ ಕಾಲೇಜುಗಳಲ್ಲಿ 800 ವಿಜ್ಞಾನ ಉಪನ್ಯಾಸಕರ ಹುದ್ದೆಗಳು ಹಾಗೂ 15000 ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನೂ ಶಿಕ್ಷಿಕರ ನೇಮಕಾತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದು, 15,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಅಗತ್ಯವಿದ್ದು, ಶೀಘ್ರವೇ 800 ವಿಜ್ಞಾನ ಉಪನ್ಯಾಸಕರು ಹಾಗೂ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *