ಹುಬ್ಬಳ್ಳಿ: ಮಹಾರಾಷ್ಟ್ರ, ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ವಿಧಾನ ಸಭೆಯ ಮತದಾನ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಂಸದ ಜಗದೀಶ್ ಶೆಟ್ಟರ್, ಮಹಾರಾಷ್ಟ್ರದಲ್ಲಿ ನಮಗೆ ಒಳ್ಳೆಯ ರಿಸ್ಪಾನ್ಸ್ ಇದೆ ಎಂದಿದ್ದಾರೆ.
ನಾನು ಎರಡು ದಿನಗಳ ಕಾಲ ಮಹಾರಾಷ್ಟ್ರದ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದೇನೆ. ಜತ್ತ, ಸೊಲ್ಲಾಪುರ, ಅಕ್ಕಲಕೋಟೆಯ ಭಾಗಗಳಲ್ಲಿ ಒಳ್ಳೆಯ ವಾತಾವರಣ ಇದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಾರ್ಖಂಡ್ ವಿಧಾನ ಸಭೆ ಕುರಿತು ನನಗೆ ಹೆಚ್ಚು ಮಾಹಿತಿ ಇಲ್ಲ. ನಾನು ಜಾರ್ಖಂಡ್ ರಾಜ್ಯದಲ್ಲಿ ಪ್ರಚಾರ ಮಾಡಿಲ್ಲ. ಆದರೆ ಜಾರ್ಖಂಡ್‌ನಲ್ಲಿ ಸಹ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





