Breaking News

ಬಿಪಿಎಲ್ ಕಾರ್ಡ್ ಫಲಾನುಭವಿಗಳ ಅರ್ಹರ ಹೆಸರು ಪುನರ್ ಸೇರ್ಪಡೆ: ರಾಜ್ಯ ಆಹಾರ ಆಯೋಗ

ಮಂಡ್ಯ: ಬಿಪಿಎಲ್ ಕಾರ್ಡ್‍ದಾರರ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳ ಹೆಸರು ಕೈಬಿಟ್ಟು ಹೋಗಿದ್ದು, ಇನ್ನೊಂದು ವಾರದ ಒಳಗೆ ಅವರ ಹೆಸರುಗಳನ್ನು ಪುನರ್ ಸೇರ್ಪಡೆ ಮಾಡಲಾಗುವುದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಕೃಷ್ಣ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಗರದಲ್ಲಿ ಸ್ವಂತ ಮನೆಯುಳ್ಳವರು, ಕಾರು ಹೊಂದಿರುವವರು, ಆದಾಯ ತೆರಿಗೆ ಪಾವತಿಸುವ ಲಕ್ಷಾಂತರ ಜನರು ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿದ್ದರು.
ಇಂಥವರನ್ನು ಅನರ್ಹಗೊಳಿಸುವ ಸಂದರ್ಭದಲ್ಲಿ ಕೆಲ ಅರ್ಹ ಫಲಾನುಭವಿಗಳ ಹೆಸರುಗಳು ಸಹ ಬಿಪಿಎಲ್ ಕಾರ್ಡ್ ಪಟ್ಟಿಯಿಂದ ಕೈಬಿಟ್ಟು ಹೋಗಿದ್ದು, ಇದನ್ನು ಸರಿಪಡಿಸಲು ಆಹಾರ ಇಲಾಖೆ ಹಾಗೂ ಆಯೋಗ ಮುಂದಾಗಿದೆ ಎಂದು ಸ್ಪಷ್ಟಪಡಿಸಿದರು.
ಈ ಬಗ್ಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರೊಂದಿಗೆ ಚರ್ಚೆ ನಡೆಸಿದ್ದು, ಅಧಿಕಾರಿಗಳು ಸರಿಪಡಿಸಲು ಎರಡು ದಿನ ಸಮಾಯಾವಕಾಶ ಕೇಳಿದ್ದಾರೆ. ಆದರೆ ನಾವು ಒಂದು ವಾರವೇ ಸಮಯ ನೀಡಿದ್ದು, ಒಟ್ಟಿನಲ್ಲಿ ಈ ಸಮಸ್ಯೆಗೆ ಶೀಘ್ರ ಪರಿಹಾರ ದೊರೆಕಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *