ಬೆಳಗಾವಿ: ಬಿಪಿಎಲ್ ಕಾರ್ಡ್ ರದ್ದು ಆಗುತ್ತಿರುವ ಬೆನ್ನಲ್ಲೇ ಇದೀಗ ತೆರಿಗೆ ಕಟ್ಟುವವರಿಗೆ ಗೃಹಲಕ್ಷ್ಮಿ ಹಣ ಸಿಗಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಹೇಳಿಕೆ ಮಹಿಳೆಯರಿಗೆ ನಿರಾಸೆ ಮೂಡಿಸಿದೆ.
ಬಿಪಿಎಲ್ ಕಾರ್ಡ್ ರದ್ದುಗೊಳಿಸುತ್ತಿರುವ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿದವರಲ್ಲಿ ಯಾರು ಆದಾಯ ತೆರಿಗೆ ಕಟ್ಟುವುದಿಲ್ಲವೋ, ಅಂಥವರಿಗೆ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತದೆ.
ತೆರಿಗೆ ಕಟ್ಟುವವರಿಗೆ ಮಾತ್ರ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ 80 ಸಾವಿರ ಬಿಪಿಎಲ್ ಪಡಿತರ ಚೀಟಿ ರದ್ದುಪಡಿಸುವ ಬದಲಿಗೆ, ಎಪಿಎಲ್ ಚೀಟಿಗಳೆಂದು ವರ್ಗಾಯಿಸಲಾಗಿದೆ. ಈ ವರ್ಗಾವಣೆಯಿಂದ ಯಾವುದೇ ಗೊಂದಲ ಇಲ್ಲ. ಎಪಿಎಲ್, ಬಿಪಿಎಲ್ ಪಡಿತರ ಚೀಟಿ ಹೊಂದಿದ ಇಬ್ಬರಿಗೂ ಗೃಹಲಕ್ಷ್ಮಿ ಹಣ ಬರುತ್ತದೆ, ಆದರೆ ತೆರಿಗೆ ಕಟ್ಟುವವರಿಗೆ ಇನ್ಮುಂದೆ ಗೃಹಲಕ್ಷ್ಮಿ ಹಣ ಬರಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನೂ ಬಿಜೆಪಿ ಪಕ್ಷದವರು ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಯತ್ನಿಸುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇಡೀ ದೇಶದಲ್ಲಿ ಇಂಥ ವ್ಯವಹಾರ ನಡೆಯುತ್ತಿದೆ. ಬಿಜೆಪಿಯವರು ನಿರಂತರವಾಗಿ ಹೀಗೆ ಪ್ರಯತ್ನಿಸುತ್ತಿದ್ದಾರೆ. ಆದರೆ, ನಾವು ಗಟ್ಟಿಯಾಗಿದ್ದೇವೆ. ಸುಭದ್ರವಾಗಿರುವ ಸರ್ಕಾರವನ್ನು ಏನೂ ಮಾಡಲಾಗದು ಎಂದು ಸವಾಲೆಸೆದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





