Breaking News

ಸರ್ಕಾರಿ ಆಸ್ಪತ್ರೆಗಳಲ್ಲಿ ಡಿ ಗ್ರೂಪ್ ಸಿಬ್ಬಂದಿಗೆ ನೇರ ಪಾವತಿಯಡಿ ತರಲು ಇಲಾಖೆ ತೀರ್ಮಾನ: ಸಚಿವ ದಿನೇಶ್ ಗುಂಡೂರಾವ್

ದಾವಣಗೆರೆ: ಸರ್ಕಾರಿ ಆಸ್ಪತ್ರೆಗಳಲ್ಲಿ ಡಿ ಗ್ರೂಪ್‌ ಸಿಬ್ಬಂದಿಯನ್ನು ನೇರ ಪಾವತಿಯಡಿ ತರಲು ಇಲಾಖೆ ಈಗಾಗಲೇ ತೀರ್ಮಾನಿಸಿ ಅನುಮೋದನೆಗಾಗಿ ಕಾನೂನು ಇಲಾಖೆಗೆ ಕಳುಹಿಸಲಾಗಿದೆ. ಅಲ್ಲಿಂದ ಅನುಮೋದನೆ ದೊರಕುವ ವಿಶ್ವಾಸವಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.
ಚಿಗಟೇರಿ ಆಸ್ಪತ್ರೆ ಆವರಣದಲ್ಲಿ 200 ಹಾಸಿಗೆಯ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ, ಟ್ರಾಮಾ ಕೇರ್‌ ಸೆಂಟರ್‌ ಉದ್ಘಾಟಿಸಿ ಮಾತನಾಡಿದ ಅವರು, ನೇರ ಪಾವತಿಗೆ ಕಾನೂನು ಇಲಾಖೆಯಿಂದ ಅನುಮೋದನೆ ದೊರೆತರೆ ಆರೋಗ್ಯ ಇಲಾಖೆಯ ಎಲ್ಲ ಡಿ ಗ್ರೂಪ್‌ ಸಿಬ್ಬಂದಿಗೆ ನೇರ ಪಾವತಿ ಅನ್ವಯಿಸಲಿದೆ ಎಂದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *