Breaking News

ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕಕ್ಕೆ 2 ನೇ ಸ್ಥಾನ: ಸಿಎಂ ಸಿದ್ದರಾಮಯ್ಯ

ನವದೆಹಲಿ: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಮಾತನಾಡಿದರು.
ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟ ಸೇರಿ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ. ಗುಜರಾತ್ ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭ ಮಾಡಿದರು. ಹಿಂದೆ ಪಶುಸಂಗೋಪನಾ ಸಚಿವನಾಗಿದ್ದು, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಲಾಯಿತು ಎಂದರು.
ಪಶುಸಂಗೋಪನೆ ಮತ್ತು ರೆಷ್ಮೆ ಸಚಿವ ವೆಂಕಟೇಶ್, ಕೃಷಿ ಸಚಿವ ಚೆಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಭೀಮಣ್ಣ ನಾಯಕ್, ರಾಜ್ಯ ಸಭಾ ಸದಸ್ಯ ಈರಣ್ಣ ಕರಾಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ತಿಮ್ಮೇಗೌಡ ಮೊದಲಾದವರು ಉಪಸ್ಥಿತರಿದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *