Breaking News

ಪಡಿತರ ಚೀಟಿಗಳ ಗೊಂದಲಕ್ಕೆ ಅಧಿಕಾರಿಗಳಲ್ಲ, ನಾನೇ ಹೊಣೆ: ಸಚಿವ ಮುನಿಯಪ್ಪ

ಬೆಂಗಳೂರು: ಪಡಿತರ ಚೀಟಿಗಳ ಗೊಂದಲಕ್ಕೆ ಅಧಿಕಾರಿಗಳಲ್ಲ, ನಾನೇ ಹೊಣೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆಯ ಸಚಿವ ಮುನಿಯಪ್ಪ ಹೇಳಿದ್ದಾರೆ.
ಬಿಪಿಎಲ್‌ ಪಡಿತರ ಚೀಟಿಗಳ ರದ್ದತಿಗೆ ಸಂಬಂಧಿಸಿದಂತೆ ಎದ್ದ ಗೊಂದಲಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇಂದು ಸುದ್ದಿಗೋಷ್ಠಿಯನ್ನು ಕರೆದಿದ್ದರು.
ಈ ವೇಳೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಲು ಪೇಚಾಡಿದರು.
ಮಾನದಂಡಗಳ ಅನ್ವಯ ಪರಿಶೀಲನೆ ಮಾಡಿ ಪರಿಷ್ಕರಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ಪರಿಷ್ಕರಿಸಲಾಗಿದೆ. ಅನರ್ಹ ಎಂಬ ಕಾರ್ಡ್​ಗಳನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿ ಇಡಲಾಗಿದೆ. ಬಿಪಿಎಲ್​ಗೆ ಅನರ್ಹರು ಎಂದು ಕಂಡು ಬಂದಿರುವ ಪಡಿತರ ಚೀಟಿ ಗಳನ್ನು ಎಪಿಎಲ್​ಗೆ ಸೇರಿಸಲಾಗಿದೆ. ಬಿಪಿಎಲ್​ಗೆ ಅರ್ಹರಿದ್ದೂ ಕೂಡ ಎಪಿಎಲ್​ಗೆ ಸೇರಿಸಿದ್ದರೇ ಅಂಥವರಿಗೆ ಮರು ಹಂಚಿಕೆ ಮಾಡುತ್ತೇವೆ ಎಂದರು.
ಬಿಪಿಎಲ್​ಗೆ ಅರ್ಹರಿದ್ದವರ ಪಡಿತರ ಚೀಟಿಗಳು ರದ್ದಾಗಿದ್ದರೆ ಒಂದು ವಾರ ಕಾಲಾವಕಾಶ ನೀಡಿ, ಮರು ನೋಂದಣಿ ಮಾಡಿಕೊಂಡು ಪಡಿತರ ಚೀಟಿಗಳ​ ಮರು ಹಂಚಿಕೆ ಮಾಡುತ್ತೇವೆ ಎಂದು ತಿಳಿಸಿದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *