Breaking News

ಹೊತ್ತಿ ಉರಿದ ಹತ್ತಿ ಬೀಜ ಹೊತ್ತು ಸಾಗುತ್ತಿದ್ದ ವಾಹನ

ಧಾರವಾಡ: ಹತ್ತಿ ಬೀಜ ಹೊತ್ತು ಸಾಗುತ್ತಿದ್ದ ಕ್ಯಾಂಟ‌ರ್ವಾಹನಕ್ಕೆ ಆಕಸ್ಮಿಕ ಬೆಂಕಿ ತಗುಲಿ ವಾಹನ ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಧಾರವಾಡ ಬೈಪಾಸ್‌ನಲ್ಲಿ ಸಂಭವಿಸಿದೆ.

ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಈ ಕ್ಯಾಂಟರ್ ವಾಹನ ಹೋಗುತ್ತಿತ್ತು. ಈ ವೇಳೆ ವಾಹನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ವಾಹನ ನಡು ರಸ್ತೆಯಲ್ಲೇ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಹಾಗೂ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಬಂದು ಬೆಂಕಿ ನಂದಿಸುವ ಕೆಲಸ ಮಾಡಿದರು. ಅಷ್ಟರಲ್ಲಾಗಲೇ ವಾಹನ ಭಾಗಶಃ ಸುಟ್ಟಿತ್ತು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *