Breaking News

ವಕ್ಫ್ ಗೆಜೆಟ್ ನೋಟಿಫಿಕೇಷನ್ ರದ್ದತಿಗೆ ಆಗ್ರಹಿಸಿ ಬೀದರ್ ನಲ್ಲಿ ಬಿಜೆಪಿಯಿಂದ ಧರಣಿ

ಬೀದರ್: ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದುಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಧರಣಿ ನಡೆಸಲಾಗುತ್ತಿದೆ.
ಪಕ್ಷದ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಜಿಲ್ಲೆಯ ವಿವಿಧ ಸ್ವಾಮೀಜಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ವಿವಿಧ ಸಂಘಟನೆಗಳವರು ಪಾಲ್ಗೊಂಡಿದ್ದಾರೆ.
ವಕ್ಫ್ ವಿವಾದ, ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು.ವಕ್ಫ್ ಅದಾಲತ್ ನಡೆಸದಂತೆ ಸರ್ಕಾರ ಆದೇಶ ಹೊರಡಿಸಬೇಕು. ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಮಾಡಿರುವುದು ಖಂಡನೀಯ, ಅದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *