Breaking News

ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯಲು ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ : ರಾಷ್ಟ್ರೀಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, 2025-26 ನೇ ಸಾಲಿನಲ್ಲಿ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಹೊಸದಾಗಿ ತೋಟಗಾರಿಕೆ ಬೆಳೆ ಬೆಳೆಯುವ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಅಗತ್ಯ ದಾಖಲಾತಿಗಳೊಂದಿಗೆ ಪಹಣಿ,ಆಧಾರ್, ಉದ್ಯೋಗ ಚೀಟಿ, ಸಣ್ಣ ಮತ್ತು ಅತೀ ಸಣ್ಣ ರೈತರ ಪ್ರಮಾಣ ಪತ್ರ, ಪರಿಶಿಷ್ಟ ಜಾತಿ, ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಹೊನ್ನಾಳಿ ಅಥವಾ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *