Breaking News

ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡಬೇಕು ಎಂದು ಸಂತೋಷ ಲಾಡ್ ಗೆ ಮನವಿ ಸಲ್ಲಿಕೆ

ಧಾರವಾಡ: ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದು, ಅವರ ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರವಿರಾಜ್ ಕಂಬಳಿ ಎನ್ನುವವರು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಮನವಿ ಸಲ್ಲಿಸಿದರು.

ಅಳ್ಳಾವರ ತಾಲೂಕಿನ ಹುಲ್ಲಿಕೇರಿ ಗ್ರಾಮದಲ್ಲಿ ರವಿರಾಜ್ ಅವರು ಲಾಡ್ ಅವರಿಗೆ ಮನವಿ ಸಲ್ಲಿಸಿ, ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷವೇ ಇದೆ. ಅಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದೆ. ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಇದ್ದಾಗ ಸಾಲ ಮನ್ನಾ ಮಾಡಲಾಗಿತ್ತು. ಈಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರವೇ ಅಧಿಕಾರದಲ್ಲಿದ್ದು, ಇಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕು ಎಂದು ರವಿರಾಜ್ ಆಗ್ರಹಿಸಿದರು.

ಇದರಿಂದ ತಾಳ್ಮೆ ಕಳೆದುಕೊಂಡ ಸಚಿವ ಲಾಡ್, ರೈತ ಮುಖಂಡನ ಜೊತೆ ಮಾತಿನ ಚಕಮಕಿಗೆ ಇಳಿದರು. ರೈತ ಮುಖಂಡ ಕಾಂಗ್ರೆಸ್‌ ಎಂದು ಉಲ್ಲೇಖಿಸಿದ್ದಕ್ಕೆ ಗರಂ ಆದ ಲಾಡ್, ಬಿಜೆಪಿ ಇಲ್ಲಿಯವರೆಗೂ ಎಷ್ಟು ಸಾಲ ಮನ್ನಾ ಮಾಡಿದೆ ಹೇಳಿ? ಕೇಂದ್ರ ಸರ್ಕಾರ ಎಷ್ಟು ಬಾರಿ ರೈತರ ಸಾಲ ಮನ್ನಾ ಮಾಡಿದೆ? ಬಾಯಿ ಬಿಟ್ಟು ಹೇಳಿ ಎಂದು ಏರು ಧ್ವನಿಯಲ್ಲೇ ರೈತ ಮುಖಂಡನೊಂದಿಗೆ ವಾಗ್ವಾದಕ್ಕಿಳಿದರು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *