Breaking News

ರಾಜ್ಯ ರಾಜಕಾರಣದಲ್ಲಿ ಬಹುದೊಡ್ಡ ಬದಲಾವಣೆಯಾಗಲಿದೆ:ಟೆಂಗಿನಕಾಯಿ

ಧಾರವಾಡ: ಬರುವ ಚಳಿಗಾಲದ ಅಧಿವೇಶನ ನಡೆದ ನಂತರ ರಾಜ್ಯ ರಾಜಕಾರಣದಲ್ಲಿ ಬಹುದೊಡ್ಡ ಬದಲಾವಣೆಯಾಗಲಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಅಭಿವೃದ್ಧಿಗೆ ಹಣವೇ ಬರುತ್ತಿಲ್ಲ ಎಂಬ ಮಾತನ್ನು ಕಾಂಗ್ರೆಸ್‌ನ ಹಿರಿಯ ಶಾಸಕರಾದ ರಾಜು ಕಾಗೆ ಸೇರಿದಂತೆ ಅನೇಕರು ಹೇಳುತ್ತಿದ್ದಾರೆ. ಅಷ್ಟೇ ಅಲ್ಲದೇ ಹೀಗೇ ಸರ್ಕಾರ ಮುಂದುವರೆದರೆ ಬರುವ ದಿನಗಳಲ್ಲಿ ನಾವು ಕಾಂಗ್ರೆಸ್ ತೊರೆಯಬೇಕಾಗುತ್ತದೆ ಎಂಬ ಮಾತನ್ನು ಕಾಂಗ್ರೆಸ್‌ನ ಅನೇಕ ಶಾಸಕರು ಹೇಳುತ್ತಿದ್ದಾರೆ. ಬರುವ ಚಳಿಗಾಲದ ಅಧಿವೇಶನ ಮುಗಿದ ಮೇಲೆ ರಾಜ್ಯ ರಾಜಕಾರಣದಲ್ಲಿ ಬಹುದೊಡ್ಡ ಪರಿವರ್ತನೆಯಾಗಲಿದೆ ಎಂದರು.

ಇಂದು ರಾಜ್ಯದಲ್ಲಿ 14 ಲಕ್ಷ ಪಡಿತರ ಚೀಟಿ ರದ್ದಾಗಿವೆ. ಈ ಬಗ್ಗೆ ಬಡವರು ಮತ್ತು ಬಿಜೆಪಿ ಪ್ರತಿಭಟನೆ ನಡೆಸಿದಾಗ ನಿನ್ನೆ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಪಡಿತರ ಚೀಟಿಗಳನ್ನು ರದ್ದು ಮಾಡಿಲ್ಲ. ರದ್ದತಿ ವಾಪಸ್ ಪಡೆಯುತ್ತೇವೆ ಎಂದು ಸಂಬಂಧಿಸಿದ ಸಚಿವರು ಹೇಳುತ್ತಾರೆ. ಈ ರೀತಿಯ ನಾಟಕವನ್ನು ಕಾಂಗ್ರೆಸ್ ಸರ್ಕಾರ ಕಳೆದ ಒಂದೂವರೆ ವರ್ಷದಿಂದ ಮಾಡುತ್ತಿದೆ ಎಂದರು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *