Breaking News

ಸಮಸ್ಯೆಗಳ ಪರಿಹಾರಕ್ಕೆ ಲೋಕಾಯುಕ್ತ ಮೊದಲ ಆಧ್ಯತೆ; ಕರ್ತವ್ಯ ಲೋಪದ ಬಗ್ಗೆ ನಂತರ ತನಿಖೆ, ಕ್ರಮ ಜಾರಿ: ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ

ಧಾರವಾಡ: ಸಾರ್ಜನಿಕರ ಸಮಸ್ಯೆಗಳ ಪರಿಹಾರಕ್ಕೆ ಕರ್ನಾಟಕ ಲೋಕಾಯುಕ್ತ ಮೊದಲ ಆಧ್ಯತೆ ನೀಡುತ್ತದೆ ಎಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾಮೂರ್ತಿ ಕೆ.ಎಂ.ಫಣೀಂದ್ರ ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಪಂವಾಯತ ಸಭಾಂಗಣದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಬಗ್ಗೆ ದೂರು ಸ್ವೀಕಾರ, ವಿಚಾರಣೆ ಹಾಗೂ ವಿಲೇವಾರಿ ಸಭೆ ಉದ್ಘಾಟಿಸಿ, ಮಾತನಾಡಿದರು.

ಜೀವಿಸುವ ಹಕ್ಕು ಮೂಲಭೂತ ಹಕ್ಕಾಗಿದೆ. ಅದು ಪ್ರತಿಯೊಬ್ಬರು ಗೌರವಯುತವಾಗಿ ಬದುಕುವ ಅವಕಾಶ ಮತ್ತು ಹಕ್ಕನ್ನು ಪ್ರತಿನಿಧಿಸುತ್ತದೆ. ಉತ್ತಮ ಪ್ರಕೃತಿ, ನೆಲ, ಜಲ, ಮಣ್ಣು, ಪರಿಸರ ಕಾಪಾಡುವುದು ಮತ್ತು ಪಡೆಯುವುದು ನಮ್ಮ ಹಕ್ಕು ಮತ್ತು ಕರ್ತವ್ಯವಾಗಿದೆ. ಭಾರತದ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳು, ಮೂಲಭೂತ ಕರ್ತವ್ಯಗಳು ಮತ್ತು ರಾಜ್ಯ ನೀತಿ ನಿರ್ದೇಶಕ ತತ್ತ್ವಗಳು ಪರಸ್ಪರ ಸಂಬಂಧ ಹೊಂದಿವೆ ಎಂದು ನ್ಯಾಯಮೂರ್ತಿ ಫಣೀಂದ್ರ ಅವರು ತಿಳಿಸಿದರು.

ಆಧುನಿಕ ಸರಕಾರಗಳು ಉತ್ತಮವಾದ ಜೀವನ ಮಾಡಲು ಸವಲತ್ತುಗಳನ್ನು ನೀಡುತ್ತದೆ. ಮತ್ತು ಅರ್ಹರಿಗೆ ಸರಕಾರಿ ಸವಲತ್ತುಗಳನ್ನು ಸರಿಯಾಗಿ ತಲುಪಿಸುವ ಜವಾಬ್ದಾರಿ ಕಾರ್ಯಾಂಗದಾಗಿದ್ದು, ಸರಕಾರದ ಕಲ್ಪಿತ ಕಾರ್ಯಗಳ ಅನುμÁ್ಠನ ಕಾರ್ಯಾಂಗದಾಗಿದೆ ಎಂದು ಅವರು ತಿಳಿಸಿದರು.

ಪ್ರತಿಯೊಂದು ವ್ಯವಸ್ಥೆಯಲ್ಲಿ ಕಾನೂನಿನ ರಚನೆ ಇದೆ. ಮನುಷ್ಯನು ಆಸ್ತಿ, ಪಾಸ್ತಿಗಳನ್ನು ಕಾಪಾಡಿಕೊಳ್ಳುವಂತಹ ಕಾನೂನು ವ್ಯವಸ್ಥೆ ನಮ್ಮಲ್ಲಿ ಇದೆ. ಆಸ್ತಿ ಅಂತಸ್ತುಗಳ ಮೇಲೆ ವಿಲ್ ಮಾಡುವ ಮೂಲಕ ಆಸ್ತಿ ಹಕ್ಕುಗಳನ್ನು ಚಲಾಯಿಸಬಹುದು ಎಂದು ಅವರು ಹೇಳಿದರು.

ಕರ್ನಾಟಕ ಲೋಕಾಯುಕ್ತವು ನಿಯಮಾನುಸಾರ ಕರ್ತವ್ಯ ನಿರ್ವಹಿಸುವ ಸರಕಾರಿ ನೌಕರರಿಗೆ ಸಹಾಯ ಮಾಡುತ್ತದೆ. ಸುಳ್ಳು ದೂರು, ಕರ್ತವ್ಯ ನಿರ್ವಹಣೆಗೆ ಅಡಚಣೆ ಉಂಟಾದರೆ ತನಿಖೆ ಮಾಡಿ, ಸೂಕ್ತ ರಕ್ಷಣೆ ನೀಡುತ್ತದೆ. ಕರ್ತವ್ಯ ಲೋಪ ಮಾಡುವ ಅಧಿಕಾರಿ, ನೌಕರರ ವಿರುದ್ಧ ಲೋಕಾಯುಕ್ತ ಕಾಯ್ದೆ ಪ್ರಕಾರ ಕಠಿಣ ಕ್ರಮಕ್ಕೆ ಶಿಫಾರಸ್ಸು ಮಾಡುತ್ತದೆ ಎಂದು ಅವರು ಹೇಳಿದರು.

ಸಾರ್ವಜನಿಕ ಸೇವೆಯೇ ನಮ್ಮ ಗುರಿ. ವಿನಾಕಾರಣ ವಿಳಂಬ, ತಪ್ಪು ಮಾಹಿತಿ, ನಿಧಾನಗತಿ ಅನುಸರಿಸುವ ಮೂಲಕ ಕರ್ತವ್ಯ ಲೋಪ ಮಾಡಬೇಡಿ. ಎಚ್ಚರಿಕೆಯಿಂದ ಮತ್ತು ಸೇವಾ ಮನೋಭಾವನೆಯಿಂದ ಕರ್ತವ್ಯ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ನ್ಯಾಯಮೂರ್ತಿಗಳು ಹೇಳಿದರು.

ಪ್ರತಿಯೊಬ್ಬರಿಗೂ ಇರುವ ಹಕ್ಕುಗಳನ್ನು ಗೌರವಿಸಬೇಕು. ಮೂಲಭೂತ ಕರ್ತವ್ಯಗಳನ್ನು ಸಂರಕ್ಷಣೆ ಮಾಡಿಕೊಳ್ಳಬೇಕು. ನೀರು, ಗಾಳಿ ಸೇರಿದಂತೆ ಮೂಲಭೂತ ಸಂಪತ್ತುಗಳನ್ನು ಕಾಪಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಅಭಿವೃದ್ಧಿ ಹೊಂದಬೇಕಾಗುವಂತಹ ಹಲವಾರು ಯೋಜನೆಗಳನ್ನು ಸರಕಾರ ಜಾರಿ ಮಾಡಿದೆ. ಕಾನೂನುಗಳಿಂದ ರಚಿಸಲ್ಪಟ್ಟ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸವನ್ನು ಕಾಯಾರ್ಂಗ ಮಾಡುತ್ತಿದೆ. ಎಲ್ಲರೂ ಒಂದೇ ಎಂಬ ಭಾವನೆಗಳಲ್ಲಿ ಜೀವನ ಸಾಗಿಸಬೇಕು. ಎಂಟು ಕೋಟಿ ಜನರ ಜವಾಬ್ದಾರಿ ಸರಕಾರದ ಹೆಗಲ ಮೇಲಿದೆ. ಪ್ರತಿಯೊಂದು ಯೋಜನೆಯಲ್ಲಿ ಅದರದ್ದೇ ಆದ ನಿಯಮಾವಳಿಗಳಿವೆ ಅದನ್ನು ನಾವು ತಿಳಿದುಕೊಳ್ಳಬೇಕು ಎಂದು ಅವರು ಹೇಳಿದರು.

ಯಾವುದೇ ರೀತಿಯ ಭ್ರμÁ್ಟಚಾರ, ಪಕ್ಷಪಾತಗಳನ್ನು ಸರ್ಕಾರದ ಅಧೀನದಲ್ಲಿರುವ ಅಧಿಕಾರಿಗಳು ಮಾಡಬಾರದು. ಸಮಯಕ್ಕೆ ಸರಿಯಾಗಿ ಕಾರ್ಯ ಅಥವಾ ಕೆಲಸ ನಿರ್ವಹಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಕರ್ತವ್ಯ ಲೋಪವಾದರೆ ಸಾರ್ವಜನಿಕರ ಹಕ್ಕು ಉಲ್ಲಂಘನೆ ಆಗುತ್ತದೆ. ಸಂಬಂಧಿಸಿದ ಅಧಿಕಾರಿಗಳು, ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಸರಿಪಡಿಸಬೇಕು ಎಂದು ತಿಳಿಸಿದರು.

ಲೋಕಾಯುಕ್ತ ಕಚೇರಿಯ ಬಗ್ಗೆ ಸಾರ್ವಜನಿಕರಿಗೆ ತಿಳಿಸಬೇಕು. ಲೋಕಾಯುಕ್ತದ 7, 8 ಮತ್ತು 9 ನೇ ಕಲಂಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಹೈಕೋರ್ಟಗಳಿಗೆ ಇರುವ ಅಧಿಕಾರವನ್ನು ಕಲಂ 17 ರಡಿಯಲ್ಲಿ ಲೋಕಾಯುಕ್ತವು ಕೂಡ ಹೊಂದಿದೆ ಎಂದು ನ್ಯಾಯಮೂರ್ತಿಗಳು ಹೇಳಿದರು.

ಸಮಸ್ಯೆಗಳ ಪರಿಹಾರದ ವಿಳಂಬ ಮತ್ತು ಕರ್ತವ್ಯ ಲೋಪ ಇವುಗಳಡಿಯಲ್ಲಿ ಕ್ರಮ ಜರುಗಿಸಲಾಗುವುದು. ನಂತರ ಸರ್ಕಾರಕ್ಕೆ ವರದಿ ನೀಡಲಾಗುವುದು. ಸರ್ಕಾರದ ಕೆಲಸ ದೇವರ ಕೆಲಸ ಎಂದು ತಿಳಿದು ಸಾರ್ವಜನಿಕರ ತೊಂದರೆಗಳನ್ನು ಬಗೆಹರಿಸುವಂತಹ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ಅವರು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಸರಕಾರಿ ಅಧಿಕಾರಿಗಳು ಕಾಯಕವೇ ಕೈಲಾಸ ಎಂಬುದನ್ನು ಅರಿತು ಕೆಲಸ ಮಾಡಿದರೆ ಯಾವುದೇ ದೂರುಗಳು ಬರುವುದಿಲ್ಲ. ನೈತಿಕ ಮೌಲ್ಯಗಳನ್ನು ಅರಿತು ಕೆಲಸ ಮಾಡಬೇಕು ಎಂದು ಹೇಳಿದರು.

ಮಾಡಿರೋ ತಪ್ಪುಗಳನ್ನು ಮತ್ತೆ ಮತ್ತೆ ಮಾಡಬಾರದು. ಅವುಗಳನ್ನು ಅರಿತು ಸರಿಪಡಿಸಿಕೊಳ್ಳಬೇಕು. ಸರ್ಕಾರಿ ಅಧಿಕಾರಿಗಳು ಕಾನೂನಾತ್ಮಕ ಯಾವೆಲ್ಲ ಜವಾಬ್ದಾರಿಗಳಿವೆ ಎಂಬುದನ್ನು ತಾವು ತಿಳಿಯಬೇಕು. ಇಲ್ಲಿಯವರೆಗೆ ಆಗಿರುವ ಲೋಪಗಳನ್ನು ಬಗೆಹರಿಸುವಂತಹ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ವೇದಿಕೆಯಲ್ಲಿ ಮಹಾನಗರ ಪೆÇಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೆÇಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಉಪ ಪೆÇಲೀಸ್ ಆಯುಕ್ತರಾದ ಸಿ.ಆರ್.ರವೀಶ, ಮಾನಿಂಗ ನಂದಗಾವಿ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಕಚೇರಿಯಲ್ಲಿನ ವಿವಾರಣಾ ವಿಭಾಗದ ಅಪರ ನಿಬಂಧಕರಾದ ಪಿ.ಶ್ರೀನಿವಾಸ, ನರಸಿಂಹಸಾ ಎಂ.ವಿ., ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ, ಸಿವಿಲ್ ನ್ಯಾಯಾಧೀಶ ಕಿರಣ ಪಿ.ಎಂ.ಪಾಟೀಲ್, ಧಾರವಾಡ ಜಿಲ್ಲಾ ಲೋಕಾಯುಕ್ತ ಪೆÇಲೀಸ್ ಅಧೀಕ್ಷಕ ಹನುಮಂತರಾಯ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *