Breaking News

ಉಪಚುನಾವಣೆ ಗೆಲುವಿನೊಂದಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಬಲ 138 ಕ್ಕೆ ಹೆಚ್ಚಳ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಇದರೊಂದಿಗೆ ಕಾಂಗ್ರೆಸ್ ಸದಸ್ಯ ಬಲ ವಿಧಾನಸಭೆಯಲ್ಲಿ 136 ರಿಂದ 138ಕ್ಕೆ ಹೆಚ್ಚಳವಾಗಿದೆ.
ಜೆಡಿಎಸ್ ನ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಂಸದರಾಗಿ ಆಯ್ಕೆಯಾಗಿದ್ದರಿಂದ ಚನ್ನಪಟ್ಟಣ ಕ್ಷೇತ್ರ ತೆರವಾಗಿತ್ತು.
ಬಿಜೆಪಿಯ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಿಗ್ಗಾವಿ ಕ್ಷೇತ್ರ ತೆರವಾಗಿತ್ತು. ಜೆಡಿಎಸ್ ಮತ್ತು ಬಿಜೆಪಿ ಈ ಕ್ಷೇತ್ರಗಳನ್ನು ಕಳೆದುಕೊಂಡಿವೆ.
ಈ. ತುಕಾರಾಂ ಸಂಸದರಾಗಿ ಆಯ್ಕೆಯಾಗಿದ್ದರಿಂದ ಸಂಡೂರಿನಲ್ಲಿ ಅವರ ಪತ್ನಿ ಅನ್ನಪೂರ್ಣ ಜಯಗಳಿಸಿದ್ದಾರೆ. ತುಕಾರಾಂ ಸಂಸದರಾಗಿದ್ದರಿಂದ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಬಲ 136ರಿಂದ 135 ಕ್ಕೆ ಇಳಿದಿತ್ತು. ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಜಯಗಳಿಸಿದ್ದು, ವಿಧಾನಸಭೆಯಲ್ಲಿ ತನ್ನ ಬಲವನ್ನು 138ಕ್ಕೆ ಹೆಚ್ಚಿಸಿಕೊಂಡಿದೆ. ಬಿಜೆಪಿ ಸದಸ್ಯ ಬಲ 66 ರಿಂದ 65ಕ್ಕೆ ಕುಸಿತವಾಗಿದೆ. ಜೆಡಿಎಸ್ ಸದಸ್ಯ ಬಲ 19 ರಿಂದ 18ಕ್ಕೆ ಕುಸಿತ ಕಂಡಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *