Breaking News

ಶಿಗ್ಗಾಂವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ: ಬೊಮ್ಮಾಯಿ

ಹುಬ್ಬಳ್ಳಿ: ಶಿಗ್ಗಾಂವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ. ಜನಾಶೀರ್ವಾದ ಸ್ವೀಕಾರ ಮಾಡುತ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾಂವ ಫಲಿತಾಂಶದ ಕುರಿತು ಮಾತನಾಡಿದ ಅವರು, ಅಲ್ಲಿಯ ಜನರ ಸ್ಪಂದನೆ ನೋಡಿದ್ರೆ ನಮಗೆ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್ ಗೆಲುವು ಸಾಧಿಸಿದ್ದಾರೆ. ಸರ್ಕಾರ ಅವರದ್ದೇ ಇದೆ, ಆಡಳಿತ ಪಕ್ಷದ ಶಾಸಕರು ಜನ ಆಯ್ಕೆ ಮಾಡಿದ್ದಾರೆ. ನಾವು ಶಿಗ್ಗಾವಿ, ಸವಣೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ಅಭಿವೃದ್ಧಿ ಪರ್ವ ಹಾಗೆಯೇ ಮುಂದುವರೆಯಲಿ ಅಂತ ಆಶಿಸುತ್ತೇನೆ. ಕ್ಷೇತ್ರದ ಜನರಿಗೆ ಒಳ್ಳೆದಾಗಲಿ ಅಂತ ಬಯಸುತ್ತೇನೆ ಎಂದರು.

10 ಜನ ಸಚಿವರು, 40ಕ್ಕಿಂತ ಹೆಚ್ಚು ಶಾಸಕರು ಬಂದಿದ್ದರು. ಸರ್ಕಾರದ ಯಂತ್ರ, ಹಣದಿಂದ ಅವರು ಗೆದ್ದಿದ್ದಾರೆ. ಮಹಾರಾಷ್ಟ್ರದಲ್ಲಿ ನಿರೀಕ್ಷೆಯಂತೆ ಮೆಜಾರಿಟಿ ಗೆಲ್ತಾ ಇದ್ದೇವೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವ, ಮೂರು ಪಕ್ಷದ ಒಗ್ಗಟ್ಟಿನಿಂದ ಕಳೆದ ಮೂರು ವರ್ಷದ ಸರ್ಕಾರದ ಅಭಿವೃದ್ಧಿ ಮೇಲೆ ಜಯ ಸಿಕ್ಕಿದೆ. ಲೋಕಸಭಾ ಚುನಾವಣೆ ನಂತರ ಜನ ನರೇಂದ್ರ ಮೋದಿಯವರ ಪರ ನಿಂತಿರೋದು ಗೊತ್ತಾಗ್ತಿದೆ ಎಂದರು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *