ಧಾರವಾಡ: ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಸೋಲು ಕಂಡಿದ್ದೇವೆ. ಸಹಜವಾಗಿ ಆಡಳಿತ ಪಕ್ಷದ ಅಭ್ಯರ್ಥಿಗಳು ಉಪಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತಾರೆ. ಈಗ ನಾವು ಸೋತಿದ್ದೇವೆ ಎಂದು ಕಾಂಗ್ರೆಸ್‌ನವರ ರೀತಿ ಇವಿಎಂ ಹ್ಯಾಕ್ ಆಗಿದೆ ಎನ್ನುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಶಿಗ್ಗಾಂವಿಯಲ್ಲಿ ನಾವು ಗೆಲ್ಲುತ್ತೇವೆ ಎಂಬ ಭರವಸೆ ಇತ್ತು. ಆದರೆ, ಅಲ್ಲಿ ಏನು ತಪ್ಪಾಗಿದೆ ಎಂಬುದರ ಬಗ್ಗೆ ಪರಾಮರ್ಶೆ ಮಾಡುತ್ತೇವೆ. ಉಪಚುನಾವಣೆಯಲ್ಲಿ ಜನ ಸಹಜವಾಗಿಯೇ ಆಡಳಿತ ಪಕ್ಷದ ಪರವಾಗಿ ಇರುತ್ತಾರೆ. ಆಡಳಿತ ಪಕ್ಷದ ಅಭ್ಯರ್ಥಿಯೇ ಗೆದ್ದರೆ ಅನುಕೂಲ ಎಂಬುದು ಸಾಮಾನ್ಯ. ಶಿಗ್ಗಾಂವಿಯಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಕಾಂಗ್ರೆಸ್‌ನಿಂದ ಹಣ ಹಂಚಿಕೆಯಾಗಿದೆ ಎಂದರು.
ಶಿಗ್ಗಾಂವಿಯಲ್ಲಿ ಎರಡೂರು ಪಂಚಾಯ್ತಿಗೆ ಒಬ್ಬೊಬ್ಬ
ಸಚಿವರನ್ನು ನೇಮಕ ಮಾಡಲಾಗಿತ್ತು. ಜನ ತೀರ್ಮಾನ
ಮಾಡಿದ್ದರೆ ನಾವು ಗೆಲ್ಲಬಹುದಿತ್ತು. ಇತ್ತೀಚಿಗ ಎಲ್ಲ
ಉಪಚುನಾವಣೆಗಳಲ್ಲಿ ನಾವು ಗೆದ್ದಿದ್ದೇವೆ. ಇಡೀ ದೇಶದಲ್ಲಿ ಕಾಂಗ್ರೆಸ್ ನೆಲಕಚ್ಚುತ್ತಿದೆ. ಮಹಾರಾಷ್ಟ್ರದಲ್ಲಿ ವಿಪಕ್ಷ ಆಗಲೂ ಸಹ ಕಾಂಗ್ರೆಸ್‌ಗೆ ಅವಕಾಶ ಇಲ್ಲದಂತಾಗಿದೆ. ಜಾರ್ಖಂಡ್‌ನಲ್ಲಿ ಕಾಂಗ್ರೆಸ್‌ನವರು ಜೆಎಂಎಂ ಜೊತೆ ಹೋಗಿದ್ದರು
bigtvnews | Hubli Dharwad News | Kannada News | Karnataka News Hubli News | News In Hubli | Local news





