Breaking News

ಆಸ್ತಿ ವಿಚಾರಕ್ಕೆ ತಂದೆ ಮಗ ಮಧ್ಯೆ ಜಗಳ: ಹೆತ್ತ ಕುರುಳು ಸಾವು

ಹುಬ್ಬಳ್ಳಿ : ಆಸ್ತಿ ವಿಚಾರಕ್ಕೆ ತಂದೆ ಮಗ ಹೊಡೆದಾಡಿಕೊಂಡ ಪರಿಣಾಮ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದರೆ, ಮಗ ಹೆಂಡತಿಯನ್ನು ಕರೆದುಕೊಂಡು ಊರು ಬಿಟ್ಟು ಹೋಗಿದ್ದಾನೆ. ಹೀಗಾಗಿ ಹೆತ್ತ ತಂದೆಯನ್ನು ಕೊಲೆ ಮಾಡಿದ ಆರೋಪಿಯ ವಿರುದ್ಧ ಆತನ ತಾಯಿಯೇ ಕೊಲೆ ಪ್ರಕರಣ ದಾಖಲು
ಮಾಡಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ
ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು 77 ವರ್ಷದ ನಾಗರಾಜ ಚಂದ್ರಶೇಖ‌ರ್ ಎಂಬುವವರ ಮಗ ಅಣ್ಣಪ್ಪನ ಕೈಯಲ್ಲಿ ಕೊಲೆಯಾದ ದುರ್ದೈವಿ ಆಗಿದ್ದಾರೆ. ಕಳೆದ ನವೆಂಬರ್ 19 ರಂದು ಮನೆಯಲ್ಲಿನ ಆಂತರಿಕ ಕಲಹ ಹಾಗೂ ಆಸ್ತಿ ವಿಚಾರಕ್ಕೆ ತಂದೆ ಹಾಗೂ ಮಗನ ನಡುವೆ ಜಗಳ ಆರಂಭವಾಗಿ ವಿಕೋಪಕ್ಕೆ ಹೋಗಿದೆ. ಈ ವೇಳೆ ಇಬ್ಬರು ನಶೆಯ ಮತ್ತಿನಲ್ಲಿದ್ದ ಕಾರಣ ಅಣ್ಣಪ್ಪ ತಂದೆಯ ಮೇಲೆ ಹಲ್ಲೆ ಮಾಡಿದ ಪರಿಣಾಮ ನಾಗರಾಜ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ. ಇತ್ತ ಮಗ ತನ್ನ ಹೆಂಡತಿಯನ್ನು ಕರೆದುಕೊಂಡು ಊರು ಬಿಟ್ಟಿದ್ದ.

ಆದ್ರೆ ನಾಗರಾಜನಿಗೆ ಮಗ ಹೊಡೆದ ಒಳ ಏಟಿನಿಂದ ರವಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ,ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಕಮಿಷನ‌ರ್ ಎನ್ ಶಶಿಕುಮಾರ್ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದರು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *