ಬ್ಯಾಡಗಿ: ಇಲ್ಲಿಯ ಅಂತರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆಗೆ ಸೋಮವಾರ 30,213 ಚೀಲ (7,553 ಕ್ವಿಂಟಲ್) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ತುಸು ಹೆಚ್ಚಳ ಕಂಡು ಬಂದಿದೆ.
ಆದರೆ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ. ಕಳೆದ ಗುರುವಾರ ಮಾರುಕಟ್ಟೆಗೆ 27,486 ಚೀಲ (6,871 ಕ್ವಿಂಟಲ್) ಆವಕವಾಗಿತ್ತು.
ಸೋಮವಾರ ಮಾರುಕಟ್ಟೆಗೆ ಒಟ್ಟು 4,070 ಲಾಟ್ ಮೆಣಸಿನಕಾಯಿ ಚೀಲಗಳನ್ನು ಟೆಂಡರ್‌ಗೆ ಇಡಲಾಗಿದ್ದು, ಈ ಪೈಕಿ ತೇವಾಂಶ ಹೆಚ್ಚಿರುವ ಹಾಗೂ ಗುಣಮಟ್ಟದ ಕೊರತೆ ಇರುವ 474 ಲಾಟ್‌ಗಳಿಗೆ ವರ್ತಕರು ಟೆಂಡರ್ ನಮೂದಿಸಿಲ್ಲ. 6 ಚೀಲ ಡಬ್ಬಿ ಮೆಣಸಿನಕಾಯಿ ₹ 28,009ರಂತೆ, 21 ಚೀಲ ಕಡ್ಡಿ ಮೆಣಸಿನಕಾಯಿ ₹ 27,400 ರಂತೆ ಮತ್ತು ಗುಂಟೂರು ತಳಿ ಮೆಣಸಿನಕಾಯಿ ₹ 16,909 ರಂತೆ ಗರಿಷ್ಟ ಬೆಲೆಯಲ್ಲಿ ಮಾರಾಟವಾಗಿವೆ.
ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ₹ 23,669, ಬ್ಯಾಡಗಿ ಕಡ್ಡಿ ₹ 22,817 ಹಾಗೂ ಗುಂಟೂರ ತಳಿ ₹ 13,009 ರಂತೆ ಮಾರಾಟವಾಗಿವೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು 221 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





