Breaking News

ಬಸ್ ನಲ್ಲಿ ಬ್ಯಾಗ್ ಕದ್ದಿದ್ದ ಕಳ್ಳಿಯ ಬಂಧನ: ಚಿನ್ನಾಭರಣ, ನಗದು ವಶ

ಹುಬ್ಬಳ್ಳಿ: ಶಿರಸಿಯಿಂದ ಧಾರವಾಡಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ‌ ಬ್ಯಾಗ್ ಕಳ್ಳತನವಾಗಿದ್ದರ ಪ್ರಕರಣಕ್ಕೆ ಸಂಬಂಧಿಸಿದಂತೆ ಛಬ್ಬಿ ಗ್ರಾಮದ ನಿವಾಸಿ ಮಹಾದೇವಿ ವಡ್ಡರ್ ಮಹಿಳಾ ಆರೋಪಿತಳನ್ನು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿತಳಿಂದ ಕಳ್ಳತನವಾಗಿದ್ದ 2 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 7000 ರೂ. ನಗದು, ಮೊಬೈಲ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಪೊಲೀಸ್ S H ಯಳ್ಳೂರ ರವರ ನೇತೃತ್ವದ ತಂಡದ ಕಾರ್ಯವೈಖರಿಯನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *