Breaking News

ಅಂಬಿಗರ ಚೌಡಯ್ಯ ನಿಗಮದ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ನೇಮಕ

ಕಲಬುರಗಿ : ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರನ್ನು ನಿಜಶರಣ ಅಂಬಿಗರ ಚೌಡಯ್ಯ ನಿಗಮದ ನೂತನ ಅಧ್ಯಕ್ಷರನ್ನಾಗಿ ನೇಮಿಸಿ, ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ-1 ಉಮಾದೇವಿ ಅವರು ಅಧಿಸೂಚನೆ ಹೊರಡಿಸಿದ್ದು, ಅಧ್ಯಕ್ಷರನ್ನಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರನ್ನಾಗಿ ಬಾಬುರಾವ್ ಚಿಂಚನಸೂರ ಅವರನ್ನು ನೇಮಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಾಬುರಾವ್ ಚಿಂಚನಸೂರ್ ಅವರು ಈ ಹಿಂದೆ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಕಳೆದ ವಿಧಾನಸಭೆಯ ಚುನಾವಣೆ ವೇಳೆಯಲ್ಲಿ ಮತ್ತೆ ತಮ್ಮ ಮಾತೃ ಪಕ್ಷ ಕಾಂಗ್ರೆಸ್ ಗೆ ಪಾಪಸಾದರು. ವಿಧಾನಸಭಾ ಚುನಾವಣೆಯಲ್ಲಿ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಜೆಡಿಎಸ್ ನ ಶರಣಗೌಡ ಕಂದಕೂರ ವಿರುದ್ಧ ಪರಾಭವಗೊಂಡಿದ್ದರು.
ಇದೀಗ ರಾಜ್ಯ ಕಾಂಗ್ರೆಸ್ ಸರಕಾರ ಅವರನ್ನು ಅಂಬಿಗರ ಚೌಡಯ್ಯ ನಿಗಮದ ಹೊಣೆ ನೀಡಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *