Breaking News

ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಪ್ರಮಾಣವಚನ ಸ್ವೀಕಾರ

ನವದೆಹಲಿ : ವಯನಾಡು ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾದ ಪ್ರಿಯಾಂಕಾ ವಾದ್ರಾ ಸಂಸತ್ ಪ್ರವೇಶ ಮಾಡಿದ್ದಾರೆ ಸಂಸದೆಯಾಗಿ ಪ್ರಮಾನವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕಾರ ವೇಳೆ ಪ್ರಿಯಾಂಕಾ ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು ಗಮನ ಸೆಳೆದಿದ್ದಾರೆ.
ಕೇರಳದ ಪಾರಂಪಾರಿಕ ಕೈಮಗ್ಗ ಸೀರೆಯಾದ ಬಿಳಿ ಬಣ್ಣದ ಕಸವು ಸೀರೆಯುಟ್ಟು ಪ್ರಿಯಾಂಕಾ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು.
ಇತ್ತೀಚೆಗೆ ಮುಕ್ತಾಯಗೊಂಡ ವಯನಾಡು ಬೈ ಎಲೆಕ್ಷನ್ ನಲ್ಲಿ ಪ್ರಿಯಾಂಕಾ ವಾದ್ರಾ, 6 ಲಕ್ಷಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಜಯಗಳಿಸಿದ್ದರು. ನವೆಂಬರ್ 25 ರಿಂದ ಸಂಸತ್ ಅಧಿವೇಶನ ಶುರುವಾಗಿದ್ದು, ಹಲವು ವಿಚಾರಕ್ಕೆ ಕಲಾಪದಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ.
ಪ್ರಿಯಾಂಕಾ ವಾದ್ರಾ ಮಣಿಪುರ ಹಿಂಸಾಚಾರ , ಸಂಭಾಲ್ ಗಲಭೆ ಬಗ್ಗೆ ಕಲಾಪದಲ್ಲಿ ಧ್ವನಿ ಎತ್ತಿದ್ದಾರೆ. ಸದನದಲ್ಲಿ ಗದ್ದಲ ಹೆಚ್ಚಾಗ್ತಿದ್ದಂತೆ ಸ್ಪೀಕರ್ ಕಲಾಪವನ್ನು ಮುಂದೂಡಿಕೆ ಮಾಡಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *