Breaking News

ಡಿ. 6 ರಂದು ಸಾಗರದಲ್ಲಿ ಅಡಿಕೆ ಬೆಳೆಗಾರರ ಸಮಾವೇಶ

ಶಿವಮೊಗ್ಗ: ಅಡಿಕೆ ನಿಷೇಧದ ಭೀತಿ, ಬೆಲೆ ಏರಿಳಿತ, ಕಾರ್ಮಿಕರ ಕೊರತೆ ಮುಂತಾದ ಸಮಸ್ಯೆಗಳಿಗೆ ಸಿಲುಕಿ ಮಲೆನಾಡಿನ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತು ಚರ್ಚಿಸಲು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಅಡಿಕೆ ಬೆಳೆಗಾರರ ಸಮಾವೇಶವನ್ನು ಡಿಸೆಂಬರ್ 6ರಂದು ಆಯೋಜಿಸಲಾಗಿದೆ.
ಕೇಂದ್ರ ಕೃಷಿ ಸಚಿವರನ್ನು ಸಹ ಸಮಾವೇಶಕ್ಕೆ ಆಹ್ವಾನಿಸಲಾಗಿದೆ.
ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ನೇತೃತ್ವದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ ಮುಂತಾದವರ ನಿಯೋಗ ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರನ್ನು ಭೇಟಿಯಾಗಿ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚೆ ನಡೆಸಿತು.
ಅಡಿಕೆ ಬೆಳೆಗಾರರ ಹಿತಾಸಕ್ತಿ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿತು. ಸಚಿವರು ಕೇಂದ್ರ ಸರ್ಕಾರವು ಅಡಿಕೆ ಬೆಳೆಗಾರರ ಪರವಾಗಿ ಇರುತ್ತದೆ ಎಂದು ಭರವಸೆ ಕೊಟ್ಟರು. ಸಚಿವರನ್ನು ಡಿಸೆಂಬರ್ 6ರಂದು ನಡೆಯುವ ಅಡಿಕೆ ಬೆಳೆಗಾರರ ಸಮಾವೇಶಕ್ಕೂ ಆಹ್ವಾನಿಸಲಾಯಿತು.
ಡಿಸೆಂಬರ್ 6ರಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಅಡಿಕೆ ಬೆಳೆಗಾರರ ಸಮಾವೇಶ ಆಯೋಜನೆ ಮಾಡಲಾಗಿದೆ. ಸಮಾವೇಶದ ಆಹ್ವಾನವನ್ನು ಒಪ್ಪಿರುವ ಸಚಿವರು ಅಡಿಕೆ ಬೆಳೆಗಾರರ ನೆರವಿಗೆ ಸರ್ಕಾರ ಬದ್ಧವಾಗಿದೆ, ಸಮವೇಶಕ್ಕೆ ಆಗಮಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *