ಬೆಂಗಳೂರು : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 9 ಮಸೂದೆ ಮಂಡಿಸಲು ಅನುಮೋದನೆ ನೀಡಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಅವರು ಮಾಹಿತಿ ನೀಡಿದರು.
ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಮಾಹಿತಿ ನೀಡಿದ ಅವರು, ಕಾರ್ಮಿಕರ ಕಲ್ಯಾಣ ತಿದ್ದುಪಡಿ ವಿಧೇಯಕ-2024, ಅಂತರ್ಜಲ ನಿಯಮಾವಳಿ ಅಭಿವೃದ್ಧಿ ನಿರ್ವಹಣಾ ತಿದ್ದುಪಡಿ, ಚಾಣಕ್ಯ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಯೂನಿವರ್ಸಿಟಿ ತಿದ್ದುಪಡಿಗೆ ಅನುಮೋದನೆ ನೀಡಲಾಗಿದೆ ಎಂದರು.
ವಿವಿಗೆ ಸಂಬಂಧಿಸಿ ಇಷ್ಟು ದಿನ ರಾಜ್ಯಪಾಲರು ಚಾನ್ಸಲರ್ ಆಗಿದ್ದರು. ಇನ್ಮುಂದೆ ಮುಖ್ಯಮಂತ್ರಿ ಅವರೇ ಚಾನ್ಸಲರ್ ಆಗಲಿದ್ದಾರೆ. ರಾಜ್ಯಪಾಲರ ಬಳಿ ಇದ್ದ ಅಧಿಕಾರವನ್ನು ಸಚಿವ ಸಂಪುಟ ಸಭೆ ಹಿಂಪಡೆದು ಈ ಅಧಿಕಾರ ಸಿಎಂಗೆ ವಹಿಸಲು ನಿರ್ಧರಿಸಿದೆ.
ಅದೇ ರೀತಿ ಅಂತರ್ಜಲ ನಿಯಮಾವಳಿ ಅಭಿವೃದ್ಧಿ ನಿರ್ವಹಣಾ ತಿದ್ದುಪಡಿಗೆ ಸಂಬಂಧಿಸಿ ಕೊಳವೆಬಾವಿ ನಿಷ್ಕ್ರಿಯ ಆಗಿದ್ದರೆ, ಮುಚ್ಚುವುದು ಕಡ್ಡಾಯ. ಮುಚ್ಚದಿದ್ದಲ್ಲಿ ಶಿಕ್ಷೆ ಹಾಗೂ ದಂಡ ವಿಧಿಸಲು ವಿಧೇಯಕದಲ್ಲಿ ಅವಕಾಶ ಇರಲಿದೆ ಎಂದು ಪಾಟೀಲರು ಹೇಳಿದರು.
ಬಿಬಿಎಂಪಿ 2ನೇ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಮೈಸೂರು ಲಲಿತ್ ಮಹಲ್ ಪ್ಯಾಲೇಸ್ ಹೊಟೇಲ್ ನ ನಿರ್ವಹಣೆ, ಕಾರ್ಯಾಚರಣೆ ನಿರ್ವಹಣೆ ದುರಸ್ಥಿ ನವೀಕರಣ, ಪಾರಂಪರಿಕ ಕಟ್ಟಡ ಸಂರಕ್ಷಸಿ ಹೆರಿಟೇಜ್ ಮಾನದಂಡ ಪ್ರಕಾರ ಮಾಡಲು ಪಾರದರ್ಶಕ ಟೆಂಡರ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





