Breaking News

ಅಧಿವೇಶನದಲ್ಲಿ ವಿಶೇಷ ಅನುದಾನಕ್ಕಾಗಿ ಧ್ವನಿ ಎತ್ತುವೆ: ಶಾಸಕ ಲಕ್ಷ್ಮಣ ಸವದಿ

ಅಥಣಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಗತ್ಯವಿಲ್ಲ, ಬದಲಿಗೆ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಮಂಡಳಿ ರಚಿಸಿ ಅಗತ್ಯವಿರುವ ಅನುದಾನ ನೀಡಬೇಕಿದೆ. ಈ ಮೂಲಕ ಪ್ರತ್ಯೇಕ ರಾಜ್ಯದ ಕೂಗಿಗೆ ಅಂತ್ಯಹಾಡಲು ಸಾಧ್ಯ. ಈ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುವೆ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅಥಣಿ ಪಟ್ಟಣದಲ್ಲಿ ಪುರಸಭೆ ವತಿಯಿಂದ ವಿವಿಧ ಯೋಜನೆಗಳಡಿಯಲ್ಲಿ ಕೈಗೊಳ್ಳುವ ₹4.10 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಇಂದು ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಹೈದರಾಬಾದ್ ಕರ್ನಾಟಕಕ್ಕೆ ವಿಶಿಷ್ಟ ಸ್ಥಾನಮಾನ ನೀಡಿದಂತೆ ಕಿತ್ತೂರು ಕರ್ನಾಟಕಕ್ಕೂ ವಿಶೇಷ ಸ್ಥಾನಮಾನ ನೀಡುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಲಿ, ಉಪಾಧ್ಯಕ್ಷೆ ಭುವನೇಶ್ವರಿ ಬೀ. ಯಕ್ಕಂಚಿ, ಸದಸ್ಯರಾದ ರಾವಸಾಬ ಐಹೊಳೆ, ಮಲ್ಲಿಕಾರ್ಜುನ ಬೂಟಾಳಿ, ಪ್ರಮೋದ ಬೀಳೂರ, ರಾಜಶೇಖರ ಗುಡ್ಡೋಡಗಿ, ಕಲ್ಮೇಶ ಮಡ್ಡಿ, ಬಸವರಾಜ ಪಾಟೀಲ, ಮುಖಂಡರಾದ ರವಿ ಬಡಕಂಬಿ, ರಾಜು ಆಲಬಾಳ, ಪೀರೋಜ ಖೆಮಲಾಪುರ, ಮುಖ್ಯಾಧಿಕಾರಿ ಅಶೋಕ ಗುಡಿಮನಿ ಇದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *