ನವಲಗುಂದ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ತಾಪಂ ಸಭಾಂಗಣದಲ್ಲಿ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡ್ರ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯಲ್ಲಿ ಪಂಚ ಗ್ಯಾರಂಟಿಗಳ ಯೋಜನೆಗಳ ಸುಗಮ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಮಾತನಾಡಿದ ಅವರು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಸಂಬಂಧಿಸಿದ ಇಲಾಖಾ ಅಧಿಕಾರಗಳು ಪ್ರಯತ್ನಿಸುವಂತೆ ಸೂಚಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಪ್ರಮುಖವಾಗಿ ಪಡಿತರ ಕಾರ್ಡ್ ನಲ್ಲಿ ಪೋತಿಗೆ ಸಂಬಂಧಪಟ್ಟ ತಿದ್ದುಪಡಿ ಇದ್ದರೆ ಸರಿಪಡಿಸಿ ಹಾಗೇ ಹೆಬ್ಬಟ್ಟು ಗುರುತಗಳ ಬಗ್ಗೆ ದೂರುಗಳನ್ನು ಸರಿಪಡಿಸಿ ಮತ್ತು ಆಹಾರ ಧಾನ್ಯಗಳ ಗುಣಮಟ್ಟ ಪರಿಶೀಲನೆ ಮಾಡುವಂತೆ ಸೂಚನೆ ನೀಡಿದರು. ಸರ್ಕಾರ ಬಸ್ ಗಳನ್ನು ನೀಡಿದ್ದು ಶಾಲಾ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿ ಬಸ್ ಅನುಕೂಲತೆಗೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





