ಬೆಳಗಾವಿ: ಪ್ರತಿ ಅಮವಾಸ್ಯೆ ಹಾಗೂ ಹುಣ್ಣಿಗೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಬೆಳಗಾವಿ ಜಿಲ್ಲೆಯ ಸುಪ್ರಸಿದ್ಧ ಸವದತ್ತಿ ಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗೆ ಕಾಲ ಸನ್ನಿಹಿತವಾಗಿದೆ. ಕಾರಣ ಕೇಂದ್ರ ಸರ್ಕಾರವು ಶತಕೋಟಿ ಅನುದಾನ ಬಿಡುಗಡೆ ಮಾಡಿದೆ.
ಈ ಕುರಿತು ಬೆಳಗಾವಿ ಬಿಜೆಪಿ ಸಂಸದರಾದ ಜಗದೀಶ್ ಶೆಟ್ಟರ್ ಅವರು ಮಾಹಿತಿ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಸುಪ್ರಸಿದ್ಧ ಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು 100 ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶುಕ್ರವಾರ ತಿಳಿಸಿದರು.
ಕೇಂದ್ರ ಸರ್ಕಾರವು “Development of lconic tourist centres of global scale 2024-25 ಈ ಯೋಜನೆ ಅಡಿ ಈ ಅನುದಾನವನ್ನು ಕೇಂದ್ರ ಪ್ರವಾಸೋದ್ಯಮ ಇಲಾಖೆ ಬಿಡುಗಡೆಗೊಳಿಸಿದೆ. ಈಗಾಗಲೇ ಪ್ರಸ್ತಾಪಸಲಾದ ಯೋಜನೆಯ ಅನುಮೋದನೆಯ ಕುರಿತು ಹಿಂದಿನ ತಿಂಗಳಷ್ಟೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮನವಿ ಮಾಡಿಕೊಳ್ಳಲಾಗಿತ್ತು.
ಸವದತ್ತಿಯ ಶ್ರೀ ರಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಮಹತ್ವತೆಯ ಕುರಿತು ಹಾಗೂ ಇಲ್ಲಿ ಬರುವ ಭಕ್ತಾಧಿಗಳ ಅನುಕೂಲಕ್ಕೆ ಮೂಲಭೂತ ಸೌಕರ್ಯದ ಅವಶ್ಯಕತೆಯ ಬಗ್ಗೆ ಕೇಂದ್ರಕ್ಕೆ ಮಾಹಿತಿ ನೀಡಲಾಗಿತ್ತು. ಇಲ್ಲಿನ ಅಭಿವೃದ್ಧಿ ಕುರಿತು ತಿಳಿಸಿದ್ದೇವು. ಅಂದು ಕೇಂದ್ರ ಸಚಿವರ ಮುಂದೆ ಅಭಿವೃದ್ಧಿ ಯೋಜನೆಯ ಒಪ್ಪಿಗೆ ನೀಡುವಂತೆ ಕೋರಿದ್ದೇವು ಎಂದು ಹೇಳಿದರು.
ನಮ್ಮ ಬೇಡಿಕೆಗೆ ಸ್ಪಂದಿಸಿ ಅದರಂತೆ ಅಭಿವೃದ್ಧಿಗೆ ಒಪ್ಪಿಗೆ ನೀಡಿ ಅನುದಾನ ಬಿಡುಗಡೆ ಮಾಡಿದ್ದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಸಂಸದ ಜಗದೀಶ್ ಶೆಟ್ಟರ್ ಅವರು ಇದೇ ವೇಳೆ ಅಭಿನಂದಿಸಿದರು.
ಕರ್ನಾಟಕ ರಾಜ್ಯದಲ್ಲಿ ಆಯ್ಕೆಯಾದ ಎರಡು ದೇವಸ್ಥಾನಗಳಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನವು. ಮುಂದಿನ ದಿನಗಳಲ್ಲಿ ಇಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯಲಿವೆ ಎಂದರು ವಿವರಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





