Breaking News

ಪ್ರಧಾನಿ ಮೋದಿ ಭೇಟಿಯಾದ ಸಿದ್ಧರಾಮಯ್ಯ: ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಲು ಮನವಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮೇಕೆದಾಟು ಸಮತೋಲನ ಜಲಾಶಯ ಮತ್ತು ಕಳಸಾ ಬಂಡೂರಿ ಯೋಜನೆಗಳಿಗೆ ತುರ್ತು ಅನುಮತಿ ನೀಡುವಂತೆ ಮನವಿ ಮಾಡಿದರು. ಅಲ್ಲದೆ, ನಬಾರ್ಡ್ ನೆರವು ಹೆಚ್ಚಳಕ್ಕೆ ಆಗ್ರಹಿಸಿದರು.
ದೆಹಲಿಯ ಪಾರ್ಲಿಮೆಂಟ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಸಭೆಯಲ್ಲಿ ಕೃಷಿ, ಜಲಸಂಪನ್ಮೂಲ ಮತ್ತು ನಗರ ಮೂಲಸೌಕರ್ಯ ಸೇರಿದಂತೆ ನಿರ್ಣಾಯಕ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುವ ಹಲವಾರು ವಿಷಯಗಳಿಗೆ ಕೇಂದ್ರ ಸರ್ಕಾರ ತುರ್ತು ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿಯನ್ನು ಅವರು ಒತ್ತಾಯಿಸಿದರು.
ಉಪಮುಖ್ಯಮಂತ್ರಿ, ನೀರಾವರಿ ಸಚಿವ ಡಿ.ಕೆ.ಶಿವಕುಮಾರ್. ಇಂಧನ ಸಚಿವ ಕೆ.ಜೆ.ಜಾರ್ಜ್ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸಿಎಂ ಜತೆ ಹಾಜರಿದ್ದರು.
ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ 2023 -24ರ ಕೇಂದ್ರ ಬಜೆಟ್‌ನಲ್ಲಿ ಅನುಮೋದನೆಯಾಗಿರುವ ₹5,300 ಕೋಟಿ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಪ್ರಸಕ್ತ ಯೋಜನೆ ಶೀಘ್ರವೇ ಅನುಮೋದನೆಗೊಂಡಲ್ಲಿ ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಗೆ ಒಳಪಡುವ ಮಧ್ಯ ಕರ್ನಾಟಕದ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಅನುಕೂಲವಾಗುತ್ತದೆ. ಆದ್ದರಿಂದ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡಬೇಕೆಂದು ಮನವಿ ಮಾಡಿದರು.
ಜೊತೆಗೆ, ಕಾವೇರಿ ನದಿ ಪಾತ್ರದ ಮೇಕೆದಾಟು ಯೋಜನೆ, ಕಳಸಾ ಬಂಡೂರಿ ಯೋಜನೆಗಳಗತ್ತ ತಾವು ತುರ್ತು ಗಮನ ಹರಿಸಬೇಕಿದೆ. ಈ ಯೋಜನೆಗಳಿಗೆ ಜಲಶಕ್ತಿ ಹಾಗೂ ಅರಣ್ಯ, ಪರಿಸರಸಚಿವಾಲಯ ಗಳಿಂದ ಶೀಘ್ರ ತೀರುವಳಿ ದೊರಕಿಸಿಕೊಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *