Breaking News

ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದಿಂದ ಕುರಿ ಮೇಕೆ ಘಟಕಕ್ಕೆ ಅರ್ಜಿ ಆಹ್ವಾನ

ಕೊಪ್ಪಳ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದಿಂದ 2024-25ನೇ ಸಾಲಿನ ಗಿರಿಜನ ಉಪಯೋಜನೆ ಅಡಿಯಲ್ಲಿ (10+1) ಕುರಿ-ಮೇಕೆ ಘಟಕದಡಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದಿಂದ 2024-25ನೇ ಸಾಲಿನ ಗಿರಿಜನ ಉಪಯೋಜನೆಯಡಿ ಗ್ರಾಮೀಣ ಭಾಗದ ಪರಿಶಿಷ್ಟ ಪಂಗಡದ ರೈತರಿಗೆ ಶೇಕಡ 90ರಷ್ಟು ಸಹಾಯಧನದೊಂದಿಗೆ (10+1) ಕುರಿ-ಮೇಕೆ ಘಟಕ ವಿತರಣೆಗೆ ಕೊಪ್ಪಳ ಜಿಲ್ಲಾವಾರು ಪರಶಿಷ್ಟ ಪಂಗಡಕ್ಕೆ 8 ಗುರಿಗಳನ್ನು ನಿಗದಿ ಪಡಿಸಲಾಗಿದೆ.
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನೋಂದಣಿಯಾದ ಕೊಪ್ಪಳ ಜಿಲ್ಲೆಯ ಚಾಲ್ತಿಯಲ್ಲಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಸದಸ್ಯತ್ವ ಹೊಂದಿರುವ 18 ರಿಂದ 60 ವರ್ಷ ವಯೋಮಿತಿಯೊಳಗಿನ ಮಹಿಳಾ ಸದಸ್ಯರು, ಮಹಿಳೆ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ 18 ರಿಂದ 60 ವರ್ಷ ಪುರುಷ ಸದಸ್ಯರು ಕುರಿ-ಮೇಕೆ ಸಾಕಾಣಿಕೆದಾರರು ಅರ್ಜಿ ಸಲ್ಲಿಸಬಹುದು.
ಈ ಯೋಜನೆಯಲ್ಲಿ ಈ ಹಿಂದೆ ಸಹಾಯಧನ ಪಡೆದಿರುವ ಫಲಾನುಭವಿಗಳನ್ನು ಪರಿಗಣಿಸಲಾಗುವುದಿಲ್ಲ. ನಿಗದಿತ ಅರ್ಜಿಗಳನ್ನು ಸಹಾಯಕ ನಿರ್ದೇಶಕುರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ಕೊಪ್ಪಳರವರ ಕಛೇರಿಯಿಂದ ಪಡೆದುಕೊಂಡು ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಡಿಸೆಂಬರ್ 15ರೊಳಗೆ ನಿಗಮದ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮ ದೂರವಾಣಿ ಸಂಖ್ಯೆ: 9663154018ಗೆ ಸಂಪರ್ಕಿಸಬಹುದಾಗಿದೆ ಎಂದು ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ಕೊಪ್ಪಳ ಸಹಾಯಕ ನಿರ್ದೇಶಕುರು ತಿಳಿಸಿದ್ದಾರೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *