Breaking News

ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲುವ ಸಲುವಾಗಿ ಮುಂಬರುವ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಜಿಲ್ಲೆಯ ಶಾಸಕರೊಳಗೊಂಡ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯ ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಆದೇಶಿಸಿದರು.
ಸಭೆಯಲ್ಲಿ ಇಲಾಖಾವಾರು ಜಿಲ್ಲೆಯ ಸಮಸ್ಯೆಗಳನ್ನು ಆಲಿಸಿ, ಮಾಹಿತಿ ಪಡೆದುಕೊಂಡರು. ಮಾಹಿತಿ ಕೊರತೆಯಿಂದ ಸಭೆಯಲ್ಲಿ ಉತ್ತರಿಸಲು ಪರದಾಡಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲಿ ಜನ ಸಾಮಾನ್ಯರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಸೂಚನೆ ನೀಡಿದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *