Breaking News

ರಸ್ತೆ ಮೂಲಸೌಕರ್ಯ ಯೋಜನೆಗಳ ಪ್ರಗತಿ ಪರಿಶೀಲಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಪ್ರಯಾಗರಾಜ್: ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದಲ್ಲಿನ ನಿರ್ಣಾಯಕ ರಸ್ತೆ ಮೂಲಸೌಕರ್ಯ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದರು.
ವಿಶೇಷವಾಗಿ ಮುಂದಿನ ತಿಂಗಳು ಪ್ರಯಾಗ್‌ರಾಜ್‌ನಲ್ಲಿ ಆರಂಭವಾಗಲಿರುವ ಮಹಾಕುಂಭದ ಆಯೋಜನೆ ಸುಗಮಗೊಳಿಸುವ ಗುರಿ ಹೊಂದಿರುವ ಯೋಜನೆಗಳನ್ನು ಪರಿಶೀಲಿಸಲಾಯಿತು.
63.17-ಕಿಲೋಮೀಟರ್ ರಾಯ್‌ಬರೇಲಿ-ಪ್ರಯಾಗ್‌ರಾಜ್ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣ, ನಾಲ್ಕು ಸ್ಥಳಗಳಲ್ಲಿ ಚತುಷ್ಪಥ ಬೈಪಾಸ್‌ಗಳ ನಿರ್ಮಾಣ, ಪ್ರಯಾಗರಾಜ್ ಒಳವರ್ತುಲ ರಸ್ತೆಯ 7.6- ಕಿಲೋಮೀಟರ್ ಭಾಗ ಮತ್ತು ಫಾಫಮೌನಲ್ಲಿ ಗಂಗಾ ನದಿಯ ಮೇಲೆ ಪ್ರಸ್ತುತ ಬಳಕೆಯಲ್ಲಿರುವ ಸೇತುವೆಗೆ ಸಮಾನಾಂತರವಾದ ಷಟ್ಪಥ ಸೇತುವೆ ಅಭಿವೃದ್ಧಿ ಸೇರಿದಂತೆ ಅನೇಕ ಯೋಜನೆಗಳು ಪರಿಶೀಲನೆ ಒಳಗೊಂಡಿದೆ.
ಮಹಾ ಕುಂಭಮೇಳ ಜನವರಿ 13 ರಿಂದ ಫೆಬ್ರವರಿ 26 ರವರೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆಯಲಿದೆ.
ಅಧಿಕೃತ ಅಂದಾಜಿನ ಪ್ರಕಾರ ವಿಶ್ವದ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮವಾದ ಮಹಾಕುಂಭ ಮೇಳಕ್ಕೆ ಈ ಬಾರಿ ೪೩ ಕೋಟಿಗೂ ಹೆಚ್ಚು ಯಾತ್ರಾರ್ಥಿಗಳ ಭಾಗವಹಿಸುವ ನಿರೀಕ್ಷೆಯಿದೆ.
ಗುಣಮಟ್ಟ ಮತ್ತು ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಈ ವರ್ಷದ ಡಿಸೆಂಬರ್ 25 ರೊಳಗೆ ಅವುಗಳ ಸಿದ್ಧತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿ, ಉಭಯ ನಾಯಕರು ನಡೆಯುತ್ತಿರುವ ಎಲ್ಲಾ ಕಾಮಗಾರಿಗಳನ್ನು ಸಕಾಲಿಕವಾಗಿ ಪೂರ್ಣಗೊಳಿಸಲು ಒತ್ತು ನೀಡಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *