Breaking News

ಹಾಡಹಗಲೇ ವ್ಯಕ್ತಿಗೆ ಚಾಕು ಇರಿತ

ಧಾರವಾಡ: ಹಾಡಹಗಲೇ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಸಂಭವಿಸಿದೆ.

ಗರಗ ಗ್ರಾಮದ ಗಿರೀಶ ಕರಡಿಗುಡ್ಡ ಎಂಬುವವರೇ ಹತ್ಯೆಗೀಡಾದವರು. ಹತ್ಯೆ ಮಾಡಿದವರು ಯಾರು? ಯಾವ ಉದ್ದೇಶಕ್ಕಾಗಿ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಗಿರೀಶ ಅವರು ಸಣ್ಣ ಪುಟ್ಟ ರಿಯಲ್ ಎಸ್ಟೇಟ್ ಕೆಲಸ ಹಾಗೂ ಕಾರುಗಳನ್ನು ಕೊಡಿಸುವ ಮತ್ತು ತೆಗೆದುಕೊಳ್ಳುವ ಕೆಲಸ ಮಾಡುತ್ತಿದ್ದರು ಎಂದು ಗೊತ್ತಾಗಿದೆ.

ಮಂಗಳವಾರ ಮಧ್ಯಾಹ್ನ ಗಿರೀಶ ತಮ್ಮ ಮನೆ ಮುಂದೆ ಬೈಕ್ ನಿಲ್ಲಿಸಿ ಒಳಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಗಿರೀಶ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.

ಘಟನೆ ನಡೆದ ಕೆಲ ಗಂಟೆಗಳ ನಂತರ ಗಿರೀಶ ಅವರ ಕೊಲೆಯಾಗಿರುವುದು ಅವರ ಪತ್ನಿಗೆ ಗೊತ್ತಾಗಿದೆ. ಕೂಡಲೇ ಅವರು ಗರಗ ಠಾಣೆಗೆ ದೂರು ನೀಡಿದ್ದು, ಸದ್ಯ ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಮತ್ತು ಡಿವೈಎಸ್‌ಪಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *