Breaking News

ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ ಘಟಕ ಸ್ಥಾಪನೆಗಾಗಿ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ ಘಟಕ ಸ್ಥಾಪನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಲ್ಲಿ ನೊಂದಾಯಿತ, ಜಿಲ್ಲೆಯ ಚಾಲ್ತಿಯಲ್ಲಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯತ್ವ ಹೊಂದಿರುವ 18 ರಿಂದ 60 ವರ್ಷ ವಯೋಮಿತಿಯೊಳಗಿನ ಪರಿಶಿಷ್ಟ ಪಂಗಡದ (ಮಹಿಳಾ ಸದಸ್ಯರಿಗೆ ಮೊದಲ ಆದ್ಯತೆ ಕೊಡಲಾಗುವುದು) ಅರ್ಹ ಅರ್ಜಿದಾರರು ಡಿಸೆಂಬರ್ 17 ರೊಳಗಾಗಿ ಅರ್ಜಿಗಳನ್ನು ಭರ್ತಿ ಮಾಡಿ ಉಪನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ, ಹೆಬ್ಬಾಳ, ಬೆಂಗಳೂರು ಕಛೇರಿಗೆ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಇತರೆ ವಿವರಗಳಿಗಾಗಿ ಆಯಾ ತಾಲ್ಲೂಕಿನ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು/ಕಾರ್ಯದರ್ಶಿ, ಮುಖ್ಯ ಪಶು ವೈದ್ಯಾಧಿಕಾರಿಗಳು ಅಥವಾ ಉಪ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ, ಕುರಿ ಭವನ, ಹೆಬ್ಬಾಳ, ಬೆಂಗಳೂರು ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *