Breaking News

ಹಾಸನ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಕೇಂದ್ರಕ್ಕೆ ಮನವಿ ಮಾಡಿದ ಎಚ್.ಡಿ.ದೇವೇಗೌಡರು

ನವದೆಹಲಿ: ಕರ್ನಾಟಕದ ಪ್ರವಾಸೋದ್ಯಮ ಕ್ಷೇತ್ರದ ಬಲವರ್ಧನೆ ಸಹಕಾರಿಯಾಗುವ ಹಾಗೂ ರೈತರಿಗೆ ಅತಿ ಹೆಚ್ಚು ಉಪಯುಕ್ತವಾಗುವ ಹಾಸನ ವಿಮಾನ ನಿಲ್ದಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
ಈ ಬಗ್ಗೆ ಗುರುವಾರ ರಾಜ್ಯಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು, ಇದು ಅತ್ಯಂತ ಮಹತ್ವಾಕಾಂಕ್ಷೆಯ ವಿಮಾನ ನಿಲ್ದಾಣವಾಗಿದ್ದು, ಕ್ಷಿಪ್ರಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿದರೆ ಜನತೆಗೆ ಹೆಚ್ಚು ಅನುಕೂಲ ಆಗುತ್ತದೆ. ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡುತ್ತದೆ ಎಂದು ಒತ್ತಿ ಹೇಳಿದರು.
ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಆಗುವುದರಿಂದ ಇತಿಹಾಸ ಪ್ರಸಿದ್ಧ ಬೇಲೂರು-ಹಳೇಬೀಡು- ಶ್ರವಣಬೆಳಗೋಳ ತಾಣಗಳ ಪ್ರವಾಸೋದ್ಯಮ ಅಭಿವೃದ್ಧಿಯಾಗುವುದರ ಜತೆಗೆ ಜಿಲ್ಲೆಯ ರೈತರಿಗೆ ಕೃಷಿ ರಫ್ತು ಹೆಚ್ಚಿಸುವಲ್ಲಿ ಸಹಕಾರಿ ಆಗುತ್ತದೆ. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಬೇಕು ಎಂದು ಅವರು ಕೋರಿದರು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *