Breaking News

ದೇವಾಲಯಗಳ ಅರ್ಚಕರಿಗೆ 5 ಲಕ್ಷ ರೂ. ಜೀವವಿಮೆ, ಗೌರವಧನ ಹೆಚ್ಚಳಕ್ಕೆ ಸಿಎಂಗೆ ಮನವಿ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದೇವಾ ಲಯಗಳ ಅರ್ಚಕರು ಮತ್ತು ನೌಕರರಿಗೆ ಕನಿಷ್ಠ 5 ಲಕ್ಷ ರೂ. ಜೀವ ವಿಮೆ ನೀಡಬೇಕು. ಜತೆಗೆ ಗೌರವಧನ 10 ಸಾವಿರ ರೂ.ಗೆ ಹೆಚ್ಚಿಸುವಂತೆ ಕೋರಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಸರಕಾರವನ್ನು ಆಗ್ರಹಿಸಿದೆ.
ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಆರೋಗ್ಯ ಸಚಿವ ದಿನೇಶ್‌ ಗುಂಡೂ ರಾವ್‌ ಮತ್ತು ಒಕ್ಕೂಟದ ಅಧ್ಯಕ್ಷ ಪ್ರೊ| ಡಾ| ಕೆ.ಇ. ರಾಧಾಕೃಷ್ಣ ನೇತೃತ್ವದಲ್ಲಿ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.
ದೇವಸ್ಥಾನದ ಒಳಾಂಗಣ ನೌಕರರನ್ನು 65 ವರ್ಷಕ್ಕೆ ನಿವೃತ್ತಿಗೊಳಿಸುವ ನಿಯಮ ರೂಪಿಸಿದ್ದು ಅದನ್ನು ರದ್ದುಪಡಿಸಬೇಕೆಂದು ಕೋರಿದ್ದಾರೆ. ಜತೆಗೆ “ಎ’ ಹಾಗೂ “ಬಿ’ ವರ್ಗದ ಮುಜರಾಯಿ ದೇವಾಲಯಗಳಿಗೆ ಪ್ರಾಧಿಕಾರ ರಚನೆಯಾಗಿದ್ದು ಮತ್ತಷ್ಟು ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಮನವಿ ಮಾಡಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *