Breaking News

ಅನ್ನಚಕ್ರ ಯೋಜನೆಗೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನವದೆಹಲಿಯಲ್ಲಿ ಅನ್ನ ಚಕ್ರ ಹೊಸ ಪೋರ್ಟಲ್‌ಗೆ ಚಾಲನೆ ದೊರೆತಿದೆ. ಕೇಂದ್ರ ಸರ್ಕಾರ ದೇಶದ 80 ಕೋಟಿ ಬಡವರಿಗೆ 2028ರವರೆಗೆ ಉಚಿತ ಪಡಿತರ ಯೋಜನೆ ವಿಸ್ತರಿಸಿದೆ.
ಅನ್ನಚಕ್ರ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಸಚಿವ ಪ್ರಹ್ಲಾದ್‌ ಜೋಶಿ, ಭಾರತ, ಯುರೋಪಿಯನ್ ಒಕ್ಕೂಟಕ್ಕಿಂತ ದುಪ್ಪಟ್ಟು ಜನಸಂಖ್ಯೆಗೆ ಉಚಿತ ಪಡಿತರ ಪೂರೈಸುತ್ತಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಭಾರತ ಪ್ರತಿ ತಿಂಗಳು 2.20 ಲಕ್ಷ ಕೋಟಿ ಮೌಲ್ಯದ ಉಚಿತ ಆಹಾರ ಧಾನ್ಯ ನೀಡುತ್ತಿದೆ ಎಂದು ಹೇಳಿದರು.
ಅಲ್ಲದೇ, ಪ್ರಸ್ತುತದಲ್ಲಿ ಕೆಲ ಫಲಾನುಭವಿಗಳು ₹ 1- 3 ಕೆಜಿ ಅತ್ಯಲ್ಪ ಬೆಲೆಯಲ್ಲಿ ಪ್ರತಿ ತಿಂಗಳು ಪಡಿತರ ಧಾನ್ಯ ಪಡೆಯುತ್ತಿದ್ದಾರೆ ಎಂದು ಹೇಳಿದರು.
3 ಲಕ್ಷ ಕೋಟಿ ಮೌಲ್ಯದ ಸೋರಿಕೆ ತಡೆ: PDS ನಲ್ಲಿ ಡಿಜಿಟಲೀಕರಣದಿಂದ ಭ್ರಷ್ಟಾಚಾರ ನಿರ್ಮೂಲನೆ ಜತೆಗೆ ₹ 3 ಲಕ್ಷ ಕೋಟಿ ಮೌಲ್ಯದ ಸೋರಿಕೆಯನ್ನು ತಡೆಯಲಾಗುತ್ತಿದೆ ಎಂದು ಸಚಿವ ಜೋಶಿ ಹೇಳಿದರು
ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದಂತೆ ನಾವಿಂದು ಪ್ರತಿ ಕ್ಷೇತ್ರ, ಹಂತದಲ್ಲೂ ಭ್ರಷ್ಟಾಚಾರ ನಿಗ್ರಹಕ್ಕಾಗಿ ಡಿಜಿಟಲ್ ಗೆ ಪರಿವರ್ತನೆ ಹೊಂದುತ್ತಿದ್ದೇವೆ. ಇದರಿಂದ ಕಾರ್ಯದಕ್ಷತೆ ಹೆಚ್ಚುವುದಲ್ಲದೆ, ಸೋರಿಕೆ ಮತ್ತು ಸಮಯದ ಉಳಿತಾಯವಾಗುತ್ತದೆ. ತ್ವರಿತ ಕಾರ್ಯಾಚರಣೆ ಸಾಧ್ಯವಾಗುತ್ತದೆ ಎಂದು ಪ್ರತಿಪಾದಿಸಿದರು.
ಅನ್ನ ಚಕ್ರ” ಪೋರ್ಟಲ್ ಮೂಲಕ ಆಹಾರ ಇಲಾಖೆ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಯತ್ನ ನಡೆದಿದೆ. ಸಾರಿಗೆ ವೆಚ್ಚ ಮತ್ತು ಸಮಯ ಉಳಿತಾಯವಾಗಲಿದೆ. ಆಹಾರ ಇಲಾಖೆ ದಕ್ಷತೆ ಹೆಚ್ಚಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ವಿವರಿಸಿದರು.
ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ NDA ಸರ್ಕಾರದ 3ನೇ ಅವಧಿಯ ಮೊದಲ 100 ದಿನಗಳಲ್ಲಿ 4 ಕೇಂದ್ರೀಕೃತ ಕ್ಷೇತ್ರಗಳಲ್ಲಿ ಪ್ರಮುಖ ಮೈಲಿಗಲ್ಲು ಸಾಧಿಸಲು ಪ್ರಯತ್ನಿಸಿದೆ ಎಂದರು.
ತಂತ್ರಜ್ಞಾನದಿಂದ ಬಲವರ್ಧನೆ: ಆಹಾರ ಇಲಾಖೆ ಕಾರ್ಯಾಚರಣೆಗಳ ಡಿಜಿಟಲೀಕರಣ, ಸಂಗ್ರಹಣೆ ಮತ್ತು ಲಾಜಿಸ್ಟಿಕ್ಸ್‌ನ ಆಧುನೀಕರಣ, ನ್ಯಾಯಬೆಲೆ ಅಂಗಡಿಗಳು (FPS) ಮತ್ತು ಇಲಾಖೆ ಅಡಿಯಲ್ಲಿ ಬರುವ ಸಂಸ್ಥೆಗಳ ಬಲವರ್ಧನೆಗೆ ತಂತ್ರಜ್ಞಾನ ಮೂಲಕ ಕ್ರಮ ಕೈಗೊಳ್ಳಲಾಗಿದೆ ಎಂದರು.
ಆಹಾರ ಭದ್ರತಾ ಯೋಜನೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ, ಏಪ್ರಿಲ್ 2020ರಲ್ಲಿ ಪ್ರಾರಂಭಿಸಲಾಯಿತು ಮತ್ತು ಕೊನೆಯದಾಗಿ ಫೆಬ್ರವರಿ 2023 ರಲ್ಲಿ ವಿಸ್ತರಿಸಲಾಯಿತು ಎಂದು ತಿಳಿಸಿದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *