Breaking News

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ) ತರಬೇತಿಗಾಗಿ ಅರ್ಜಿ ಸಲ್ಲಿಸುವ ಅವಧಿ ಡಿ. 18 ವರೆಗೆ ವಿಸ್ತರಣೆ

ಧಾರವಾಡ : 2024-25 ನೇ ಸಾಲಿಗೆ ಭಾರತೀಯ ಶುಶ್ರೂಷಾ ಪರಿಷತ್ತಿನ ಮಾರ್ಗಸೂಚಿಯಂತೆ ಧಾರವಾಡ ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಿಗೆ ತರಬೇತಿ ಕೇಂದ್ರಕ್ಕೆ 24 ತಿಂಗಳ ತರಬೇತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಡಿಸೆಂಬರ 18 ವರೆಗೆ ವಿಸ್ತರಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಗಳನ್ನು www.karhfw.gov.in ವೆಬ್ ಸೈಟ್‍ನಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ (SIHFW) ನಲ್ಲಿ ಡೌನ್ಲೋಡ್ ಮಾಡಿಕೊಂಡು ಸೂಕ್ತ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಧಾರವಾಡ ಇಲ್ಲಿಗೆ ಡಿಸೆಂಬರ 18, 2024 ರಂದು ಸಂಜೆ 5:30 ಗಂಟೆಯೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ : 080-23206123/6, ಇ-ಮೇಲ್: directorsihfw.bg@gmail.com ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಧಾರವಾಡ ದೂರವಾಣಿ ಸಂಖ್ಯೆ: 0836-2447483 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *