Breaking News

ಜಿಲ್ಲಾ ಗ್ಯಾರೆಂಟಿ ಪ್ರಾಧಿಕಾರ ಸಭೆ

ಧಾರವಾಡ : ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುμÁ್ಠನ ಮತ್ತು ಸಾಂಸ್ಥಿಕ ಕಾರ್ಯ ವಿಧಾನಗಳು ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ಜರುಗಿತು.

ಗ್ಯಾರಂಟಿ ಯೋಜನೆಯ ಬಗ್ಗೆ ಅಧಿಕಾರಿಗಳು ಗಮಹರಿಸಿ, ಜನರಿಗೆ ತಲುಪಿಸುವ ಕಾರ್ಯವನ್ನು ಮಾಡಬೇಕು. ಕೆಲವು ಭಾಗಗಳಲ್ಲಿ ಗ್ಯಾರಂಟಿ ಯೋಜನೆ ಸರಿಯಾಗಿ ತಲುಪದಿರುವ ಬಗೆಗೆ ದೂರುಗಳು ಬಂದಿದ್ದು, ಅಂತಹ ದೂರುಗಳನ್ನು ಪರಿಶೀಲಿಸಬೇಕೆಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ. ಅವರು ಮಾತನಾಡಿ, ಹಳ್ಳಿಯಲ್ಲಿ ಕೆಲಸ ಮಾಡುವಂತ ಶಿಕ್ಷಕಿಯರಿಗೆ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ಬಸ್ ನಿಲ್ದಾಣದಲ್ಲಿ ಮಹಿಳೆಯರಿದ್ದರೂ ಬಸ್ ನಿಲುಗಡೆ ಮಾಡದಿರುವಂತ ದೂರುಗಳು ಬರುತ್ತಿದ್ದು, ಅಧಿಕಾರಿಗಳು ಅದನ್ನು ಗಮನಿಸಿ ಸರಿಯಾದ ಕ್ರಮ ಜರುಗಿಸಬೇಕು.

ಯುವನಿಧಿ ಯೋಜನೆಯ ಬಗ್ಗೆ ಹೆಚ್ಚಿನ ಪ್ರಚಾರ ಮಾಡಿ, ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕು. ಡಿಜಿಟಲ್ ಮಾಧ್ಯಮದ ಬಳಕೆ ಹೆಚ್ಚಾಗಿರುವುದರಿಂದ ಯುವನಿಧಿ ಯೋಜನೆಯ ಬಗ್ಗೆ ಡಿಜಿಟಲ್ ಮಾಧ್ಯಮಗಳಲ್ಲಿ ಹೆಚ್ಚಾಗಿ ಪ್ರಚಾರ ಮಾಡಿ ತಲುಪಿಸುವ ವ್ಯವಸ್ಥೆ ಮಾಡಬೇಕು ಎಂದು ಅವರು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಉಪಾಧ್ಯಕ್ಷರುಗಳಾದ ಮುರಗಯ್ಯಾ ವಿರಕ್ತಮಠ, ಅಬ್ದುಲ್ ರಶೀದ ಬೋಳಾಬಾಹಿ ಹಾಗೂ ರತ್ನಾ ತೇಗೂರಮಠ ಅವರು ಸಭೆಯಲ್ಲಿ ಮಾತನಾಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಸದಸ್ಯರು ಉಪಸ್ಥಿತರಿದ್ದರು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *