Breaking News

ಕಲಬುರಗಿ: 6 ಲೈನ್ ಗ್ರೀನ್ ಫೀಲ್ಡ್ ಹೆದ್ದಾರಿ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ

ಕಲಬುರಗಿ: ಜೇವರ್ಗಿಯ ಎನ್‌.ಎಚ್‌-150ರ ಬಳಿಯ ಮಾರಡಗಿ ಎಸ್-ಆಂದೋಲಾ ಗ್ರಾಮದ ಬಳಿ ಮಹಾರಾಷ್ಟ್ರ ಗಡಿಯಿಂದ ಕರ್ನಾಟಕ ಗಡಿಯವರೆಗೆ ನಿರ್ಮಾಣವಾಗುತ್ತಿರುವ ಆರು ಲೈನ್ ಗ್ರೀನ್‍ಫೀಲ್ಡ್ ಹೆದ್ದಾರಿ ಕಾಮಗಾರಿಯನ್ನು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಪ್ರಾಜೆಕ್ಟ್ ಗುತ್ತಿಗೆದಾರ ಹಾಗೂ ಎಂಜಿನಿಯರ್‌ಗಳು ಯೋಜನೆಯ ವ್ಯಾಪ್ತಿ, ಪ್ರಸ್ತುತ ಪ್ರಗತಿ ಕುರಿತು ಜಿಲ್ಲಾಧಿಕಾರಿಗೆ ಮಾಹಿತಿ ಒದಗಿಸಿದರು. ಬಳಿಕ ಕಲಬುರಗಿ ರಿಂಗ್ ರೋಡ್‍ನ ಸರ್ವಿಸ್ ರಸ್ತೆ ಕಾಮಗಾರಿ, ಎನ್‍ಎಚ್-50 ವಿಭಾಗವನ್ನು ಪರಿಶೀಲಿಸಿದರು.
ಈ ವೇಳೆ ಶಾಸಕಿ ಖನೀಜ್ ಫಾತಿಮಾ ಮಾತನಾಡಿ, ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಗುತ್ತಿಗೆದಾರರನ್ನು ಒತ್ತಾಯಿಸಿದರು.‌
ಜಿಲ್ಲಾಧಿಕಾರಿ ಪ್ರತಿಕ್ರಿಯೆ ನೀಡಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಂದಿನ ಪರಿಶೀಲನಾ ಸಭೆ ನಡೆಯಲಿದ್ದು, ಮೇಲ್ಸೇತುವೆ ಹಾಗೂ ಸರ್ವಿಸ್ ರಸ್ತೆ ಕಾಮಗಾರಿಗಳ ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಎನ್‌ಎಚ್‌ಎಐ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಪೊಲೀಸ್‌ ಆಯುಕ್ತ ಶರಣಪ್ಪ ಎಸ್.ಡಿ., ಕುಡಾ ಅಧ್ಯಕ್ಷ ಮಜಹರ್ ಆಲಂಖಾನ್, ಪಾಲಿಕೆ ಸದಸ್ಯರು, ಮಹಾನಗರ ಪಾಲಿಕೆ ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *