Breaking News

ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ ಡಿ.16 ರಂದು ಸುವರ್ಣಸೌಧದ ಬಳಿ ಕೃಷಿ ಕಾರ್ಮಿಕ ಸಂಘಟನೆ ಪ್ರತಿಭಟನೆ

ಬೆಳಗಾವಿ: ಬಗರ್‌ಹುಕುಂ ಸಾಗುವಳಿದಾರರಿಗೆ ತಕ್ಷಣವೇ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಡಿ.16ರಂದು ಸುವರ್ಣ ವಿಧಾನಸೌಧ ಬಳಿ ಪ್ರತಿಭಟನೆ ಮಾಡಲಾಗುವುದು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ರಾಜ್ಯ ಘಟಕದ ಕಾರ್ಯದರ್ಶಿ ಬಿ.ಭಗವಾನ್‌ ರೆಡ್ಡಿ ಹೇಳಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೂರಹಿತರು ಮತ್ತು ಬಡ ರೈತರು ಜೀವನೋಪಾಯಕ್ಕಾಗಿ ಕಂದಾಯ ಮತ್ತು ಅರಣ್ಯದ ಕುರುಚಲು ಗಿಡ, ಕಲ್ಲುಭೂಮಿಯಲ್ಲಿ ಹಲವು ದಶಕಗಳಿಂದ ಸಾಗುವಳಿ ಮಾಡುತ್ತ ಬಂದಿದ್ದಾರೆ. ತಕ್ಷಣವೇ ಹಕ್ಕುಪತ್ರ ವಿತರಣೆಗೆ ಸರ್ಕಾರ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಸಾಗುವಳಿದಾರರಿಗೆ ಹಕ್ಕುಪತ್ರ ಕೊಡಲು ಹೊಸದಾಗಿ ಜಾರಿಗೆ ತಂದಿರುವ ಆಯಪ್‌ ಅನ್ನು ತಕ್ಷಣವೇ ಹಿಂಪಡೆಯಬೇಕು. ಗ್ರಾಮಮಟ್ಟದ ಸಮೀಕ್ಷೆಗಳ ಮೂಲಕ ರೈತರಿಗೆ ನ್ಯಾಯ ಒದಗಿಸುವ ಕೆಲಸವಾಗಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಲಕ್ಷ್ಮಣ ಜಡಗಣ್ಣವರ, ಲಕ್ಕಪ್ಪ ಬಿಜ್ಜಣ್ಣವರ, ಭರಮಣ್ಣ ಮಾಶಾನೆಟ್ಟಿ ಇತರರಿದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *