Breaking News

ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ: ಸರ್ಕಾರದ ಮೇಲೆ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜು

ಬೆಂಗಳೂರು: ಉಪ ಚುನಾವಣೆ ಭರ್ಜರಿ ಗೆಲುವು ಹಾಗೂ ಜನ ಕಲ್ಯಾಣೋತ್ಸವ ಯಶಸ್ಸಿನ ಹುಮ್ಮಸ್ಸಿನಲ್ಲಿ ರುವ ರಾಜ್ಯ ಸರ್ಕಾರಕ್ಕೆ ಸೋಮವಾರದಿಂದ 10 ದಿನಗಳ ಕಾಲ ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನದ ರೂಪದಲ್ಲಿ ಅಗ್ನಿ ಪರೀಕೆ ಎದುರಾಗಿದೆ.
ವಕ್ಫ್‌, ಮುಡಾ, ಬಾಣಂತಿಯರ ಸಾವಿ ನಂತಹ ವಿವಾದಗಳನ್ನು ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿ ಬೀಳಲು ಪ್ರತಿಪಕ್ಷ ಗಳು ಸಜ್ಜಾಗಿದ್ದರೆ, ಕೊರೋನಾ ಹಗರಣ ಕುರಿತ ಕುನ್ಹಾ ವರದಿ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಮೇಲಿನ ಬಿಡಿಎ ಹಗರಣ ಆರೋಪ, ಲೈಂಗಿಕ ದೌರ್ಜನ್ಯ ಪ್ರಕರಣ, ಯತ್ನಾಳ್-ವಿಜಯೇಂದ್ರ ಕಚ್ಚಾಟ ಪ್ರಸ್ತಾಪಿಸಿ ಪ್ರತಿಪಕ್ಷಗಳನ್ನು ಕಟ್ಟಿ ಹಾಕಲು ಸರ್ಕಾರವೂ ಸಿದ್ಧತೆ ನಡೆಸಿದೆ.
ಹೀಗಾಗಿ ಆಡಳಿತ ಮತ್ತು ಪ್ರತಿಪಕ್ಷ ನಡುವೆ ಜಟಾಪಟಿ ನಿರೀಕ್ಷಿಸಲಾಗಿದೆ. ಕುಂದಾ ನಗರಿಯ ಸುವರ್ಣಸೌಧದಲ್ಲಿ 11ನೇ ಚಳಿಗಾಲದ ಅಧಿವೇಶನ ನಡೆಯಲಿದೆ. ರಾಜ್ಯ ಸರ್ಕಾರಕ್ಕೆ ಮುಡಾ ಪ್ರಕರಣದಲ್ಲಿ ಇ.ಡಿ ಹೊರಗೆಡವಿರುವ ತನಿಖಾ ವಿಚಾರಗಳನ್ನು ಮುಂದಿಟ್ಟುಕೊಂಡು ಮುಖಭಂಗ ಉಂಟು ಮಾಡಲು ಬಿಜೆಪಿ-ದಳ ಸಜ್ಜಾಗಿವೆ.
ಇದರ ಜತೆಗೆ ವಲ್ಪ ಭೂ ವಿವಾದ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಮಾನ್ಯತೆಗಿದ್ದ ನಿಯಮ ಸಡಿಲ, ಗುತ್ತಿಗೆಯಲ್ಲೂ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಬೇಕೆಂಬ ಪ್ರಸ್ತಾವನೆ ಸೇರಿ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ತುಷ್ಟಿಕರಣ ನಡೆಸುತ್ತಿದೆ ಎಂದು ಬಿಂಬಿಸುವುದು, ಜತೆಗೆ ಬಾಣಂತಿಯರ ಸರಣಿ ಸಾವು ಉಂಟಾಗಿದ್ದರೂ ಯಾರೊಬ್ಬರೂ ಬಳ್ಳಾರಿಗೆ ಭೇಟಿ ನೀಡಿ ಪರಿಹಾರ ನೀಡದಿರುವುದು ಹಾಗೂ ತಪ್ಪಿತಸ್ಥ ಕಂಪನಿಗಳ ಮೇಲೆ ಕ್ರಮ ಕೈಗೊಳ್ಳದ ಬಗ್ಗೆ ಸದನದಲ್ಲಿ ಆಕ್ರೋಶ ವ್ಯಕ್ತಪಡಿಸಲೂ ಎನ್‌ಡಿಎ ಕೂಟ ಸಿದ್ಧತೆ ನಡೆಸಿದೆ.
ಅದೇ ರೀತಿ ಗ್ಯಾರಂಟಿಗಳ ಅನುಷ್ಠಾನದಲ್ಲಿನ ಲೋಪ, ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡದಿರುವುದು, ಅಧಿಕಾರ ಹಂಚಿಕೆಯಂಥ ಅಸ್ತ್ರಗಳೊಂದಿಗೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿವೆ ಎಂದು ತಿಳಿದುಬಂದಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *